ಜೋಡೋ ಯಾತ್ರೆಯಲ್ಲಿ ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಕಾರ್ಯಾಕ್ರಮದ ವೇಳೆ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ಉತ್ತರ ಪ್ರದೇಶದ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಎಕೆ ಶ್ರೀವಾಸ್ತವ ಅವರು ಆದೇಶದಲ್ಲಿ ದೂರುದಾರ ನೃಪೇಂದ್ರ ಪಾಂಡೆಗೆ ಸಿಆರ್ಪಿಸಿಯ ಸೆಕ್ಷನ್ 200ರ ಅಡಿಯಲ್ಲಿ ಸಾಕ್ಷ್ಯವನ್ನು ನೀಡುವಂತೆ ಸೂಚಿಸಿದ್ದಾರೆ.

CrPC ಯ ಸೆಕ್ಷನ್ 202 ರ ಅಡಿಯಲ್ಲಿ ಸಾಕ್ಷಿ ಪರೀಕ್ಷಿಸಿದ ನಂತರ,ದೂರು ದಾಖಲಿಸಬೇಕೇ ಬೇಡವೇ ಎಂಬುದನ್ನು ನ್ಯಾಯಾಲಯ ನಿರ್ಧರಿಸುತ್ತದೆ.

ನ್ಯಾಯಾಲಯವು ಮುಂದಿನ ವಿಚಾರಣೆಯ ದಿನಾಂಕವನ್ನು ಜನವರಿ 9ಕ್ಕೆ ನಿಗದಿಪಡಿಸಿದೆ.

ಪಾಂಡೆ ಅವರು ಸಿಆರ್ಪಿಸಿಯ ಸೆಕ್ಷನ್ 156 (3) ಅಡಿಯಲ್ಲಿ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ಈ ವಿಷಯವನ್ನು ತನಿಖೆ ಮಾಡಲು ಪೊಲೀಸರಿಗೆ ನಿರ್ದೇಶನ ನೀಡಲು ನಿರಾಕರಿಸಿತು. ಅದನ್ನು ದೂರು ಪ್ರಕರಣವಾಗಿ ಪರಿಗಣಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!