ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಹೇಳಿಕೆ: ಎಂಎಲ್ಸಿ ಎನ್ ರವಿಕುಮಾರ್ ಗೆ ನಿರೀಕ್ಷಣಾ ಜಾಮೀನು

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್ಸಿ ಎನ್ ರವಿಕುಮಾರ್ ಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಈ ಪ್ರಕರಣ ರದ್ದುಕೋರಿ ಎಂಎಲ್ಸಿ ಎನ್ ರವಿಕುಮಾರ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿ ಆದೇಶಿಸಿತ್ತು.

ಇಂದು ಜಾಮೀನು ಕುರಿತಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು, ಎಂಎಲ್ಸಿ ಎನ್ ರವಿಕುಮಾರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂಪಾಯಿ ಮೊತ್ತದ ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸಲು ಸೂಚಿಸಿದೆ. ಅಲ್ಲದೇ ತನಿಖೆಗೆ ಸಹಕರಿಸಬೇಕು, ಸಾಕ್ಷ್ಯಾಧಾರ ನಾಶಪಡಿಸದಂತೆ ಕೋರ್ಟ್ ಷರತ್ತು ವಿಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!