February 6, 2026
Friday, February 6, 2026
spot_img

ಪಕ್ಷದ ವಿರುದ್ಧ ಹೇಳಿಕೆ: ಕಾಂಗ್ರೆಸ್ ನಿಂದ ನವಜೋತ್ ಕೌರ್ ಸಿಧುಗೆ ಗೇಟ್ ಪಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ .

ಈ ಕುರಿತು ಮಾಹಿತಿ ನೀಡಿದ ಪಂಜಾಬ್ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಪಕ್ಷದ ಶಿಸ್ತು ಎಲ್ಲಕ್ಕಿಂತ ಮುಖ್ಯ. ಕಾಂಗ್ರೆಸ್​​ ಹಾಕಿದ ಗೆರೆ ದಾಟುವವರು, ಪಕ್ಷದ ವಿರುದ್ಧ ಕೆಲಸ ಮಾಡುವ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆ ನವಜೋತ್ ಸಿಂಗ್ ಸಿಧು ಅವರ ಪತ್ನಿಯಾಗಿರುವ ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷ ತೊರೆದಿದ್ದರು , ಇದೀಗ ಪಕ್ಷದಿಂದ ಉಚ್ಚಾಟಿಸಲಾಗಿದೆ .

ನವಜೋತ್ ಕೌರ್ ಸಿಧು ರಾಹುಲ್ ಗಾಂಧಿಯನ್ನು ಪಪ್ಪು ಎಂದು ಕರೆದಿದ್ದರು ಎಂದು ಆರೋಪಿಸಲಾಗಿದೆ.

ಕೆಲವು ದಿನಗಳ ಹಿಂದೆ, ಕೌರ್ ಸಿಧು ಅವರು ಪಂಜಾಬ್ ಮುಖ್ಯಮಂತ್ರಿಯಾಗಲು 500 ಕೋಟಿ ರೂ. ಸೂಟ್‌ಕೇಸ್ ನೀಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನ ಉಚ್ಚಾಟಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !