ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಹೇಳಿಕೆ: ಸಚಿವ ಜಮೀರ್ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚನ್ನಪಟ್ಟಣ ಉಪ ಚುನಾವಣೆ ಕಾವು ಜೋರಾಗಿದೆ. ಇತ್ತೀಚೆಗೆ ಸಚಿವ ಜಮೀರ್​ ಅಹ್ಮದ್​ ಖಾನ್​ ಅವರು, ಏಯ್​​ ಕುಮಾರಸ್ವಾಮಿ ನಿನಗೆ ಮುಸಲ್ಮಾನರ ಮತ ಬೇಕಾ? ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡುತ್ತೀಯಾ? ನಿನ್ನ ರೇಟು ಹೇಳು. ಮುಸಲ್ಮಾನರೇ ಒಂದೊಂದು ಪೈಸೆ ಹಾಕಿ ನಿನ್ನಿಡೀ ಕುಟಂಬವನ್ನೇ ಖರೀದಿ ಮಾಡುತ್ತಾರೆ ಎಂದು ಏಕವಚನದಲ್ಲೇ ದಾಳಿ ನಡೆಸಿದ್ದರು.

ಇದರ ಬೆನ್ನಲ್ಲೇ ಎಚ್‌.ಡಿ ಕುಮಾರಸ್ವಾಮಿ ಅವರನ್ನು ನಿಂದಿಸಿದ್ದ ಜಮೀರ್​​ ವಿರುದ್ಧ ಇಡೀ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಳಿಕ ಎಚ್ಚೆತ್ತ ಜಮೀರ್​ ಅವರು, ನನ್ನ ಹೇಳಿಕೆಯಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.

ಇದೀಗ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಜಮೀರ್​ ವಿರುದ್ಧ ದೂರು ನೀಡಲಾಗಿದೆ. ವಕೀಲ RLN ಮೂರ್ತಿ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದು, ಜಮೀರ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಜಾತಿ, ಧರ್ಮಗಳ ಮಧ್ಯೆ ದ್ವೇಷ ಭಾವನೆ ಬಿತ್ತುವ ಪ್ರಯತ್ನ ಜಮೀರ್​ ಅವರದ್ದು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!