ಕೇಂದ್ರ ಸಚಿವನ ವಿರುದ್ಧ ಹೇಳಿಕೆ: ಬಿಜೆಪಿಯಿಂದ ಶಾಸಕ ಕೈಲಾಶ್ ಮೇಘವಾಲ್ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಬಿಜೆಪಿ ಶಾಸಕ ಕೈಲಾಶ್ ಮೇಘವಾಲ್ ಅವರನ್ನು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.

ಈ ಕುರಿತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ ಪಿ ಜೋಶಿ ಅವರು, ಶಹಾಪುರ ಶಾಸಕ ಕೈಲಾಶ್ ಮೇಘವಾಲ್ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ಬಳಿಕ ಈ ಕ್ರಮ ಕೈಗೊಂಡಿದೆ.

ಪಕ್ಷದ ಅಧ್ಯಕ್ಷರು ಕೈಲಾಶ್ ಮೇಘವಾಲ್ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದ್ದಾರೆ ಮತ್ತು ಮುಂದಿನ ಕ್ರಮಕ್ಕಾಗಿ(ರಾಜ್ಯ ಮಟ್ಟದ) ಶಿಸ್ತು ಸಮಿತಿಗೆ ಉಲ್ಲೇಖಿಸಲಾಗಿದೆ ಎಂದು ಶಿಸ್ತು ಸಮಿತಿ ಅಧ್ಯಕ್ಷ ಓಂಕಾರ್ ಸಿಂಗ್ ಲಖಾವತ್ ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!