ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತಾದ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ದಾಖಲಾಗಿರುವ ಅನೇಕ ಎಫ್‌ಐಆರ್‌ಗಳನ್ನು ಕ್ರೋಢೀಕರಿಸಲು ಕೋರಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಂದೂಡಿದೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆಯನ್ನು 2025ರ ಫೆಬ್ರವರಿಗೆ ಮರು ವಿಚಾರಣೆ ನಿಗದಿಪಡಿಸಿದೆ.
ಸನಾತನ ಧರ್ಮ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರುದ್ಧವಾದುದು ಎಂದಿದ್ದ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು “ಕೊರೊನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂ” ನಂತಹ ಕಾಯಿಲೆಗಳಿಗೆ ಹೋಲಿಸಿದ್ದರು. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಈ ಹೇಳಿಕೆಗೆ ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಾದ್ಯಂತ ಅನೇಕ ಎಫ್‌ಐಆರ್‌ಗಳು ದಾಖಲಿಸಲಾಗಿತ್ತು.
ವಿಚಾರಣಾ ನ್ಯಾಯಾಲಯಗಳ ಮುಂದೆ ದೈಹಿಕವಾಗಿ ಹಾಜರಾಗುವುದರಿಂದ ರಾಜಕಾರಣಿ ಉದಯನಿಧಿ ಸ್ಟಾಲಿನ್ಗೆ ವಿನಾಯಿತಿ ನೀಡುವ ಮಧ್ಯಂತರ ಆದೇಶವು ಮುಂದಿನ ಆದೇಶದವರೆಗೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.