ಹೊಸದಿಗಂತ ಡಿಜಿಟಲ್ ಡೆಸ್ಕ್;
ಕಾಂಗ್ರೆಸ್ ಸಚಿವ ಸತೀಶ್ ಜಾರಕಿಹೊಳಿ ಹಿಂದು ಧರ್ಮದ ಕುರಿತ ನೀಡಿದ್ದ ವಿವಾದಿತ ಹೇಳಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಾಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದರಿಂದ ಸತೀಶ್ ಜಾರಕಿಹೊಳಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ವಕೀಲ ಕೆ. ದಿಲೀಪ್ ಕುಮಾರ್ ಎಂಬುವವರು ಖಾಸಗಿ ದೂರು ನೀಡಿದ್ದರಿಂದ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಿಂದ ವಿಚಾರಣಗೆ ಹಾಜರಾಗುವಂತೆ ಸತೀಶ್ ಜಾರಕಿಹೊಳಿಗೆ ಸಮನ್ಸ್ ನೀಡಲಾಗಿದೆ.
2022ರ ನವೆಂಬರ್ 7ರಂದು ಕಾರ್ಯಕ್ರಮವೊಂದರಲ್ಲಿ ಹಿಂದು ಪದಕ್ಕೆ ಆಶ್ಲೀಲ ಅರ್ಥವಿದೆ ಎಂದು ವಿವಾದಿತ ಹೇಳಿಕೆ ನೀಡಿದ್ದರು. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರ್ಟ್‌ಗೆ ವಕೀಲ ದೂರು ನೀಡಿದ್ದಾರೆ.
ವಕೀಲ ಕೆ. ದಿಲೀಪ್ ಕುಮಾರ್ ನೀಡಿದ್ದ ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ನೀಡಿದೆ.