ಮೋದಿ ಉಪನಾಮದ ಕುರಿತ ಹೇಳಿಕೆ: ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿ ಪಾಟ್ನಾದ ನ್ಯಾಯಾಲಯವೊಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಏಪ್ರಿಲ್ 25ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಜನಪ್ರತಿನಿಧಿಗಳ ನ್ಯಾಯಾಲಯದ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದಿ ದೇವ್ ಅವರು, ಮಾರ್ಚ್ 18 ರಂದು ನೀಡಿದ ಆದೇಶದಲ್ಲಿ ಏಪ್ರಿಲ್ 12 ರಂದು ತನ್ನ ಮುಂದೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ತಿಳಿಸಿತ್ತು. ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಪ್ರತಿವಾದಿ ವಕೀಲರು, ಇಡೀ ತಂಡವು ಸೂರತ್ ಪ್ರಕರಣದಲ್ಲಿ ನಿರತವಾಗಿದೆ ಎಂದು ತಿಳಿಸಿ ಮತ್ತೊಂದು ದಿನಾಂಕವನ್ನು ಕೋರಿದರು. ಇದಕ್ಕೆ ನ್ಯಾಯಾಧೀಶರು, ಏಪ್ರಿಲ್ 25ರಂದು ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯದ ಮುಂದೆ ಭೌತಿಕ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ರಾಹುಲ್ ಗಾಂಧಿಯವರ ವಕೀಲರನ್ನು ಕೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!