ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಮಾನಿಸಿದ್ದಾರೆ ಮತ್ತು ಮಾನಹಾನಿಕರ ಪದ ಬಳಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಸಂಸದರು ಸೋಮವಾರ ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ವಿರುದ್ಧ ಸಂಸತ್ತಿನ ಹಕ್ಕುಚ್ಯುತಿ ನಿರ್ಣಯ ಮಂಡಿಸಿದರು.
ಸೋನಿಯಾ ಹೇಳಿಕೆ ಅತ್ಯುನ್ನತ ಹುದ್ದೆಯ ಘನತೆಯನ್ನು ಕುಗ್ಗಿಸುವ ಉದ್ದೇಶವನ್ನು ಹೊಂದಿದೆ ಎಂದು ಬಿಜೆಪಿ ಸಂಸದರು ಆರೋಪಿಸಿದ್ದಾರೆ.
ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರು ಇತ್ತೀಚೆಗೆ ಭಾರತದ ರಾಷ್ಟ್ರಪತಿಗಳ ವಿರುದ್ಧ ಬಳಸಿದ ಕೆಲವು ಅಸಂಸದೀಯ, ಅವಹೇಳನಕಾರಿ ಹೇಳಿಕೆಗಳ ಬಗ್ಗೆ ನಾವು ತೀವ್ರ ನಿರಾಶೆಯಿಂದ ಹಕ್ಕುಚ್ಯುತಿ ಮಂಡಿಸುತ್ತಿದ್ದೇವೆ. ಇದು ಗಂಭೀರ ಪರಿಗಣನೆ ಮತ್ತು ಶಿಸ್ತು ಕ್ರಮಕ್ಕೆ ಅರ್ಹವಾಗಿವೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ರಾಷ್ಟ್ರಪತಿಗಳು ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ನಂತರ, ಮುರ್ಮು ಅವರು ಕೊನೆಯವರೆಗೂ ತುಂಬಾ ದಣಿದಿದ್ದರು… ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು. ಕಳಪೆ ವಿಷಯ ಎಂದು ಸೋನಿಯಾ ಗಾಂಧಿ ಹೇಳಿದ್ದರು.