August 25, 2026
Tuesday, August 25, 2026
spot_img

ಪ್ರಧಾನಿ ಮೋದಿ ಕುರಿತು ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೇಶವ್ಯಾಪ್ತಿ ಆಕ್ರೋಶಗಳು ಹೆಚ್ಚುತ್ತಿದ್ದು, ಬಿಜೆಪಿಯು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ಕುರಿತು ಬಿಜೆಪಿ ನಿಯೋಗವು ಆಯೋಗಕ್ಕೆ ದೂರು ನೀಡಿದ್ದು, ಖರ್ಗೆ ಅವರು ಪ್ರಧಾನಿ ಕುರಿತು ಹೇಳಿಕೆ ನೀಡುವ ಮೂಲಕ ಮಾದರಿ ನೀತಿ ಸಂಹಿತೆ ಉಲಂಘಿಸಿದ್ದಾರೆ. ಹೀಗಾಗಿ ತಕ್ಷಣವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಹಾಗೂ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸೂಚಿಸಬೇಕು ಎಂದು ಒತ್ತಾಯಿಸಿದೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕಿರಣ್‌ ರಿಜಿಜು, ಖರ್ಗೆ ಹೇಳಿಕೆ ಇಡೀ ದೇಶಕ್ಕೆ ಮಾಡಿದ ಅಪಮಾನವಾಗಿದೆ . ಈ ಕೂಡಲೇ ತಮ್ಮ ತಪ್ಪನ್ನು ಅರಿತು ಪ್ರಧಾನಿ ಅವರಲ್ಲಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರದಂದು ತಮಿಳುನಾಡು ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಟೀಕಿಸುವ ಭರದಲ್ಲಿ ಭಯೋತ್ಪಾದಕ ಎಂದು ಕರೆದಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !