ಸನಾತನ ಧರ್ಮದ ಕುರಿತ ಹೇಳಿಕೆ: ಉದಯನಿಧಿ ಸ್ಟಾಲಿನ್ ವಿರುದ್ಧ ಅಮಿತ್ ಶಾ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸನಾತನ ಧರ್ಮದ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್(Udhayanidhi Stalin) ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಕೆಲವರು ಸನಾತನ ಧರ್ಮದ ಬಗ್ಗೆ ಸಾಕಷ್ಟು ಅಪ ಪ್ರಚಾರ ಮಾಡುತ್ತಿದ್ದಾರೆ, ಸನಾತನ ಧರ್ಮವನ್ನು ಮುಗಿಸುವುದಾಗಿ ಉದಯನಿಧಿ ಹೇಳಿಕೆ ನೀಡಿದ್ದಾರೆ. ಹಿಂದು ಸಂಘಟನೆಗಳನ್ನು ಲಷ್ಕರ್ ಸಂಘಟನೆಗಳಿಗೆ ಹೋಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಪ್ರತಿಪಕ್ಷಗಳು ದೇಶದ ಸಂಸ್ಕೃತಿ, ಇತಿಹಾಸ ಮತ್ತು ಸನಾತನ ಧರ್ಮವನ್ನು ಅವಮಾನಿಸುತ್ತಿದ್ದಾರೆ.ಭಾರತ ಮೈತ್ರಿಕೂಟದ ಎರಡು ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಡಿಎಂಕೆ, ಒಬ್ಬರು ಮುಖ್ಯಮಂತ್ರಿ (ಉದಯನಿಧಿ) ಅವರ ಪುತ್ರ ಮತ್ತು ಇನ್ನೊಬ್ಬರು ಮಾಜಿ ಕೇಂದ್ರ ಹಣಕಾಸು ಸಚಿವ (ಕಾರ್ತಿ ಚಿದಂಬರಂ) ಅವರ ಪುತ್ರ ಸನಾತನ ಧರ್ಮದ ನಿರ್ಮೂಲನೆಗೆ ಕರೆ ನೀಡುತ್ತಿದ್ದಾರೆ ಎಂದು ಹೇಳಿದರು.

ಈ ಜನರು ಮತಬ್ಯಾಂಕ್ ಓಲೈಕೆಗಾಗಿ ‘ಸನಾತನ ಧರ್ಮ’ದ ಬಗ್ಗೆ ಮಾತನಾಡಿದ್ದಾರೆ. ಅವರು ‘ಸನಾತನ ಧರ್ಮ’ವನ್ನು ಅವಮಾನಿಸಿದ್ದಾರೆ’ ಎಂದು ದೂರಿದರು.

ಕಳೆದ ಎರಡು ದಿನಗಳಿಂದ ಪ್ರತಿಪಕ್ಷಗಳು ದೇಶದ ಸಂಸ್ಕೃತಿ, ಇತಿಹಾಸ ಮತ್ತು ಸನಾತನ ಧರ್ಮವನ್ನು ಅವಮಾನಿಸುತ್ತಿದ್ದಾರೆ.ಭಾರತ ಮೈತ್ರಿಕೂಟದ ಎರಡು ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಡಿಎಂಕೆ, ಒಬ್ಬರು ಮುಖ್ಯಮಂತ್ರಿ (ಉದಯನಿಧಿ) ಅವರ ಪುತ್ರ ಮತ್ತು ಇನ್ನೊಬ್ಬರು ಮಾಜಿ ಕೇಂದ್ರ ಹಣಕಾಸು ಸಚಿವ (ಕಾರ್ತಿ ಚಿದಂಬರಂ) ಅವರ ಪುತ್ರ ಸನಾತನ ಧರ್ಮದ ನಿರ್ಮೂಲನೆಗೆ ಕರೆ ನೀಡುತ್ತಿದ್ದಾರೆ ಎಂದು ಹೇಳಿದರು.

ರಾಮ ಮಂದಿರ ವಿಚಾರವಾಗಿ ಕಾಂಗ್ರೆಸ್ ವರ್ಷಗಳಿಂದ ದೇವಸ್ಥಾನಕ್ಕೆ ತಡೆ ಒಡ್ಡಿತ್ತು. ಆದರೆ, ಸುಪ್ರೀಂ ಕೋರ್ಟ್ ಆದೇಶದ ನಂತರ ಮೋದಿ ಅವರು ದೇಗುಲ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿದ್ದು, ರಾಮ ಹುಟ್ಟಿದ ನೆಲದಲ್ಲಿಯೇ ಜನವರಿಯಲ್ಲಿ ಭವ್ಯ ಮಂದಿರ ನಿರ್ಮಾಣವಾಗಲಿದೆ. ಅದನ್ನು ತಡೆಯಲು ಇಂಡಿಯಾ ಮೈತ್ರಿಗೆ ಸಾಧ್ಯವಿಲ್ಲ ಎಂದರು.

ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯೂ, ಕೊರೊನಾ ವೈರಸ್​ಗೆ ಹೋಲಿಸಿದ್ದರು. ಇದೆಲ್ಲದರ ವಿರುದ್ಧ ಹೋರಾಡುವುದಲ್ಲ, ಅದನ್ನು ಬುಡದಿಂದಲೇ ನಿರ್ಮೂಲನೆ ಮಾಡಬೇಕು ಎಂದು ಸ್ಟಾಲಿನ್ ಹೇಳಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!