ಹೊಸದಿಗಂತ ಡಿಜಿಟಲ್ ಡೆಸ್ಕ್:
ಸನಾತನ ಧರ್ಮ (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದುವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ ಬೆಂಗಳೂರು ಕೋರ್ಟ್ (Bengaluru Court) ಸಮನ್ಸ್ ನೀಡಿದೆ.
ಸ್ಟಾಲಿನ್‌ಗೆ (Udhayanidhi Stalin) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿದ್ದು, ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ ಸಮನ್ಸ್ ಜಾರಿಗೊಳಿಸಿದೆ.