ಸನಾತನ ಹಿಂದು ಧರ್ಮದ ಕುರಿತು ಹೇಳಿಕೆ: ಉದಯನಿಧಿ ಸ್ಟಾಲಿನ್‌ಗೆ ಚಾಟಿ ಬೀಸಿದ ಸುಪ್ರೀಂಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸನಾತನ ಹಿಂದು ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ತಮಿಳುನಾಡು ಸಿಎಂ ಕೆ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಸುಪ್ರೀಂಕೋರ್ಟ್ ಚಾಟಿ ಬೀಸಿದೆ.

ಬಾಯಿಗೆ ಬಂದಂತೆ ಮಾತನಾಡಲು ನೀವು ಜನಸಾಮಾನ್ಯರಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ, ಈ ರೀತಿ ಮಾತನಾಡುವ ಮೂಲಕ ನೀವು ನಿಮ್ಮ ಹಕ್ಕನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದೀರಿ ಎಂದು ಉದಯನಿಧಿ ಸ್ಟಾಲಿನ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ನೀವು ಓರ್ವ ಸಾಮಾನ್ಯ ವ್ಯಕ್ತಿ ಅಲ್ಲ ಜವಾಬ್ದಾರಿಯುತ ಹುದ್ದೆಯಲ್ಲಿರುವವರು ಹೀಗಾಗಿ ಈ ರೀತಿ ಕಾಮೆಂಟ್ ಮಾಡುವುದರಿಂದ ದೂರ ಇರಬೇಕು ಎಂದಿದೆ .

ಸನಾತನ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಹಿನ್ನೆಲೆಸ್ಟಾಲಿನ್ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಎಲ್ಲಾ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸುವಂತೆ ಕೋರಿ ಉದಯನಿಧಿ ಸ್ಟಾಲಿನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಉತ್ತರಪ್ರದೇಶ, ಕರ್ನಾಟಕ, ಬಿಹಾರ, ಜಮ್ಮು ಮತ್ತು ಕಾಶ್ಮೀರ ಹಾಗೂ ಮಹಾರಾಷ್ಟ್ರದಲ್ಲಿ ದಾಖಲಾಗಿರುವ ಕೇಸುಗಳನ್ನು ಒಟ್ಟುಗೂಡಿಸುವಂತೆ ಕೋರಿ ಉದಯನಿಧಿ ಅರ್ಜಿ ಸಲ್ಲಿಸಿದ್ದರು. ಸ್ಟಾಲಿನ್ ಪರ ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲ, ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ಪ್ರತಿನಿಧಿಸಿದ್ದರು. ಆದರೆ ಉದಯನಿಧಿ ಸ್ಟಾಲಿನ್ ನಡೆಗೆ ಅಸಮ್ಮತಿ ಸೂಚಿಸಿದ ನ್ಯಾಯಾಲಯ ಹೇಳಿಕೆಗಳನ್ನು ನೀಡುವ ಮೊದಲು ಅದರ ಪರಿಣಾಮಗಳ ಬಗ್ಗೆ ತಿಳಿದಿರಬೇಕು ಎಂದು ಹೇಳಿದರು.

ನೀವೇನೂ ಸಾಮಾನ್ಯ ವ್ಯಕ್ತಿ ಅಲ್ಲ, ನೀವು ನಿಮ್ಮ ಹಕ್ಕುಗಳನ್ನು ದುರುಪಯೋಗಪಡಿಸಿಕೊಂಡಿದ್ದೀರಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಹಾಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ದುರುಪಯೋಗಪಡಿಸಿಕೊಂಡಿದ್ದೀರಿ? ಈಗ ಅರ್ಚಿಕಲ್ 32ರ ಅಡಿಯಲ್ಲಿ ರಕ್ಷಣೆಗಾಗಿ ಸುಪ್ರೀಂಕೋರ್ಟ್‌ಗೆ ಬಂದಿದ್ದೀರಿ? ನೀವು ಏನು ಹೇಳಿದ್ದೀರಿ ಹಾಗೂ ಅದರ ಪರಿಣಾಮ ಏನು ಎಂಬುದರ ಬಗ್ಗೆ ನಿಮಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!