ಮಹಿಳೆಯರ ಕುರಿತು ಹೇಳಿಕೆ: ಚುನಾವಣಾ ಆಯೋಗಕ್ಕೆ ಶಾಮನೂರು ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್‌:

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ನೀಡಿದ್ದ ಆ ಒಂದು ಹೇಳಿಕೆ ರಾಷ್ಟ್ರಮಟ್ಟದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು.

ಭಾರತದ ಬ್ಯಾಡ್ಮಿಂಟನ್​ ತಾರೆ ಸೈನಾ ನೆಹ್ವಾಲ್​ ಸೇರಿದಂತೆ ಸಾಕಷ್ಟು ಮಹಿಳೆಯರು ಆಕ್ರೋಶ ಹೊರಹಾಕಿದ್ದರು.

ಇದೀಗ ಖುದ್ದು, ಶಾಸಕ ಶಾಮನೂರು ಶಿವಶಂಕರಪ್ಪ ಅವರು ತಮ್ಮ ಹೇಳಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಬಗ್ಗೆ ನನಗೆ ಆಗದವರು ದ್ವೇಷದಿಂದ ಈ ರೀತಿ ಹೇಳಿಕೆ ಕೊಟ್ಟಿದ್ದೇನೆ ಎಂದು ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಇದನ್ನೇ ಆಧಾರವಾಗಿ ಇಟ್ಟುಕೊಂಡು ಬ್ಯಾಡ್ಮಿಂಟನ್​ ಆಟಗಾರ್ತಿ ಸೈನಾ ನೆಹ್ವಾಲ್​ ಅವರು ತಮ್ಮ ಟ್ವೀಟ್​ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ನಾನು ಅಂತಹ ಹೇಳಿಕೆ ನೀಡಿಲ್ಲ.

ನಾನು ಹೇಳಿದ ಹೇಳಿಕೆ ಈ ರೀತಿ ಇದೆ. ‘ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತರಲ್ಲ ಎಂಬುದನ್ನು ನಮ್ಮ ಪಕ್ಷದ ದಿವಂಗತ ಇಂದಿರಾಗಾಂಧಿಯವರು ಸಾಬೀತುಪಡಿಸಿದ್ದಾರೆ. ಅದೇ ರೀತಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲೂ ಮಹಿಳೆಯರೇ ಸ್ಪರ್ಧಿಸಿದ್ದು, ನಿಮ್ಮ ಮತವನ್ನು ನಿಮ್ಮ ಸಮಸ್ಯೆಯನ್ನು ದೆಹಲಿಯವರೆಗೆ ತಲುಪಿಸುವವರಿಗೆ ಮತ ನೀಡಿ’ ಎಂದು ಹೇಳಿದ್ದೇನೆ ಎಂದಿದ್ದಾರೆ.

ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಆರೋಪಿಸಿರುವ ಶಾಮನೂರ, ಬ್ಯಾಡ್ಮಿಂಟನ್​ ಆಟಗಾರ್ತಿ ಸೈನಾ ನೆಹ್ವಾಲ್ ಅವರು ತಮ್ಮ ‘ಎಕ್ಸ್‌’ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಸಹಾಯಕ ಚುನಾವಣಾಧಿಕಾರಿಗೆ ಲಿಖಿತವಾಗಿ ಸಮುಜಾಯಿಷಿ ನೀಡುವಂತೆ ಕೋರಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!