ಮಹಿಳಾ ಜಡ್ಜ್ ಮುಂದೆ ಮಾತ್ರ ಹೇಳಿಕೆ ದಾಖಲಿಸುವೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯ ಸುವರ್ಣ ಸೌಧದಲ್ಲಿ ಕಲಾಪದ ವೇಳೆ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಾನು ಮಹಿಳಾ ನ್ಯಾಯಾಧೀಶರ ಮುಂದೆ 164 ಹೇಳಿಕೆಯನ್ನು ದಾಖಲಿಸುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಸಿಟಿ ರವಿ ತಮ್ಮನ್ನು ಅವಾಚ್ಯವಾಗಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿಕೆ ದಾಖಲಿಸಲು ಸಿಐಡಿ ಮುಂದಾಗಿದೆ. ಎರಡು ದಿನಗಳ ಹಿಂದೆ ಸಿಐಡಿ ಸಿಟಿ ರವಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು.

ಇದೀಗ ಸಿಐಡಿ ಲಕ್ಷ್ಮಿ ಹೆಬ್ಬಾಳಕರ್‌ ಸೆಕ್ಷನ್ 164 ಅಡಿ ಹೇಳಿಕೆ ದಾಖಲಿಸಲು ಮುಂದಾಗಿದೆ.ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ‌ ಎಸಿಎಂಜೆ 4 ರ ನ್ಯಾಯಾಲಯದಲ್ಲಿ 164 ಹೇಳಿಕೆ ದಾಖಲಿಸಲು ಸಿದ್ಧತೆ ಮಾಡಲಾಗಿತ್ತು. ಆದರೆ ಅಲ್ಲಿ ಪುರುಷ ನ್ಯಾಯಾಧೀಶರಿರುವ ಕಾರಣ ಹೆಬ್ಬಾಳ್ಕರ್‌ ಮಹಿಳಾ ನ್ಯಾಯಾಧೀಶರ ಮುಂದೆ ಮಾತ್ರ 164 ಹೇಳಿಕೆ ನೀಡುತ್ತೇನೆ ಎಂದಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಅವರ ಈ ಒಂದು ನಿರ್ಧಾರದ ಕುರಿತು ಸಿಐಡಿ ಅಧಿಕಾರಿಗಳು ಮಹಿಳಾ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಅನುಮತಿ ನೀಡಬೇಕೆಂದು ಕೋರ್ಟಿಗೆ ಮನವಿ ಮಾಡಿದ್ದಾರೆ. ಕೋರ್ಟ್ ಅನುಮತಿ ನೀಡಿದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಅವರ 164 ಹೇಳಿಕೆಯನ್ನು ಸಿಐಡಿ ಅಧಿಕಾರಿಗಳು ದಾಖಲಿಸಿಕೊಳ್ಳಲಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!