ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 193.53 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ಪೂರೈಕೆ: ಆರೋಗ್ಯ ಇಲಾಖೆ ಮಾಹಿತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 193.53 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ಡೋಸ್‌ಗಳನ್ನು ಭಾರತ ಸರ್ಕಾರ, ಉಚಿತವಾಗಿ ಮತ್ತು ನೇರ ರಾಜ್ಯ ಸಂಗ್ರಹಣೆ ವರ್ಗದ ಮೂಲಕ ಒದಗಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ತಿಳಿಸಿದೆ.
ಇನ್ನು 16,67,39,155 ಕೋಟಿಯಷ್ಟು ಬಳಕೆಯಾಗದ ಕೋವಿಡ್ ಲಸಿಕೆ ಡೋಸ್‌ಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಲಭ್ಯವಿವೆ ಎಂದು ಸಚಿವಾಲಯ ತಿಳಿಸಿದೆ.
ಕೇಂದ್ರ ಸರ್ಕಾರವು ವೇಗ ಹೆಚ್ಚಿಸಲು ಮತ್ತು ದೇಶಾದ್ಯಂತ ಕೋವಿಡ್​ ವ್ಯಾಕ್ಸಿನೇಷನ್ ವ್ಯಾಪ್ತಿ ವಿಸ್ತರಿಸಲು ಬದ್ಧವಾಗಿದೆ.
ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್‌ನ ಭಾಗವಾಗಿ, ಭಾರತ ಸರ್ಕಾರವು ರಾಜ್ಯಗಳು ಮತ್ತು ಯುಟಿಗಳಿಗೆ ಉಚಿತವಾಗಿ ಕೋವಿಡ್ ಲಸಿಕೆಗಳನ್ನು ಒದಗಿಸುವ ಮೂಲಕ ಬೆಂಬಲ ನೀಡುತ್ತಿದೆ. ಕೋವಿಡ್​​ ವ್ಯಾಕ್ಸಿನೇಷನ್ ಡ್ರೈವ್‌ನ ಸಾರ್ವತ್ರೀಕರಣದ ಹೊಸ ಹಂತದಲ್ಲಿ, ಕೇಂದ್ರ ಸರ್ಕಾರವು ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುವ 75 ಪ್ರತಿಶತದಷ್ಟು ಲಸಿಕೆಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಖರೀದಿಸಿ ಉಚಿತವಾಗಿ ಪೂರೈಸುತ್ತದೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!