July 14, 2026
Tuesday, July 14, 2026
spot_img

ಕೇಂದ್ರದ ತೆರಿಗೆಯಲ್ಲೂ ರಾಜ್ಯಗಳದ್ದೇ ದರ್ಬಾರ್: 41% ಹಣ ನೀಡಲು ಹಣಕಾಸು ಆಯೋಗ ಶಿಫಾರಸು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡುವ ತೆರಿಗೆ ಪಾಲಿನಲ್ಲಿ ಭಾರಿ ಹೆಚ್ಚಳ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಹಣಕಾಸು ಆಯೋಗದ ಶಿಫಾರಸಿನಂತೆ, ಕೇಂದ್ರದ ಒಟ್ಟು ತೆರಿಗೆ ಆದಾಯದಲ್ಲಿ ರಾಜ್ಯಗಳಿಗೆ ಶೇಕಡಾ 41 ರಷ್ಟು ಪಾಲನ್ನು ನೀಡಲಾಗುತ್ತಿದೆ.

ಇದು ಇದುವರೆಗಿನ ಇತಿಹಾಸದಲ್ಲೇ ಅತ್ಯಂತ ಹೆಚ್ಚಿನ ತೆರಿಗೆ ಹಂಚಿಕೆಯಾಗಿದೆ ಎಂದು ಸಚಿವರು ಪುನರುಚ್ಚರಿಸಿದ್ದಾರೆ. ಈ ನಿರ್ಧಾರದಿಂದಾಗಿ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಹಣಕಾಸು ಸ್ವಾಯತ್ತತೆ ಸಿಗಲಿದ್ದು, ಅಭಿವೃದ್ಧಿ ಯೋಜನೆಗಳಿಗೆ ವೇಗ ಸಿಗಲಿದೆ. ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !