ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯಗಳ ಬಳಿ ಇನ್ನೂ 2.11 ಕೋಟಿ ಡೋಸ್ ಲಸಿಕೆ ಇದೆ: ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದ ಕೇಂದ್ರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಆನ್ ಲೈನ್ ಡೆಸ್ಕ್:

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ 2.11 ಕೋಟಿ ಗೂ ಅಧಿಕ ಕೊರೋನಾ ಲಸಿಕೆ ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕೇಂದ್ರ ಸರ್ಕಾರವು ಈವರೆಗೂ 42,12,43,730 (42.15 ಕೋಟಿ) ಪ್ರಮಾಣದಷ್ಟು ಲಸಿಕೆಯನ್ನು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಖಾಸಗಿ ಆಸ್ಪತ್ರೆಗಳಿಗೆ ನೀಡಿದೆ. ಈ ಪೈಕಿ 2,11,93,241 ಡೋಸ್ ಲಸಿಕೆ ಲಭ್ಯವಿದೆ ಎಂದು ತಿಳಿಸಿದೆ.
ತ್ಯಾಜ್ಯಗಳು ಸೇರಿದಂತೆ ಒಟ್ಟು 40.02 ಕೋಟಿ ಡೋಸ್ ಲಸಿಕೆಗಳು ಬಳಕೆಯಾಗಿದೆ. ಮುಂದಿನ ದಿನಗಳಲ್ಲಿ 71,40,000 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಜನವರಿ 16ರಿಂದ ದೇಶದಲ್ಲಿ ಕೊರೋನಾ ವಿರುದ್ಧದ ಅತಿದೊಡ್ಡ ಲಸಿಕಾ ಅಭಿಯಾನ ಪ್ರಾರಂಭವಾಗಿದ್ದು, ಈವರೆಗೂ 41,18,46,401 ಮಂದಿ ಲಸಿಕೆ ಪಡೆದಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss