ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಇಂದು ಕಾಂಗ್ರೆಸ್ ಪ್ರತಿಭಟನೆ‌, ಹೈ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಿಎಂ ಸಿದ್ದರಾಮಯ್ಯ‌ ವಿರುದ್ಧ ಪ್ರಾಸಿಕ್ಯೂಷನ್’ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸೋವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದ್ದು ಈ ಹಿನ್ನೆಲೆಯಲ್ಲಿ ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು, ಸಂಘಟನೆಗಳು, ಸಿದ್ದರಾಮಯ್ಯ ಅಭಿಮಾನಿಗಳ ಸಂಘಗಳು ಇಂದು ನಗರದಾದ್ಯಂತ ಪ್ರತಿಭಟನೆ‌ ನಡೆಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಅಲರ್ಟ್ ಆಗಿರುವ ಪೊಲೀಸರ, ರಾಜ್ಯಾದ್ಯಂತ ಪೊಲೀಸ್ ಕಟ್ಟೆಚ್ಚರ ವಹಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು, ಎಲ್ಲಾ ಜಿಲ್ಲಾಕೇಂದ್ರಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಕೆಲ ಕಿಡಿಗೇಡಿಗಳು ಪ್ರತಿಭಟನೆಯಲ್ಲಿ ನುಸಳಿಕೊಂಡು ಕಲ್ಲು ಹೊಡೆದು, ಅಶಾಂತಿಯ ವಾತಾವರಣ ಸೃಷ್ಟಿಸಬಹುದು. ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಬಹುದು. ಈ ನಿಟ್ಟಿನಲ್ಲಿ ಬಹಳ ಎಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ ಎಂದು ಹೇಳಿದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!