ರಾಜ್ಯಾದ್ಯಂತ ಕೈ ಪ್ರತಿಭಟನೆ: ರಾಜ್ಯಪಾಲರಿಗೆ Z ಕೆಟಗರಿ ಸೆಕ್ಯೂರಿಟಿ, ಬುಲೆಟ್ ಪ್ರೂಫ್​ ಕಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಖ್ಯಮಂತ್ರಿ ಸಿದ್ದಾರಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್  ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಲ್ಲದೇ, ಬಾಂಗ್ಲಾದೇಶ ಪ್ರಧಾನಿಯಂತೆ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿ​ಗೆ Z ಕೆಟಗರಿ ಸೆಕ್ಯೂರಿಟಿ  ನೀಡಿದೆ. ರಾಜ್ಯಪಾಲರು ಬುಲೆಟ್ ಪ್ರೂಫ್​ ಕಾರು ತರಿಸಿಕೊಂಡಿದ್ದಾರೆ. ಆಗಸ್ಟ್ 29ರವರೆಗೆ ಎಲ್ಲ ಸಾರ್ವಜನಿಕ ಕಾರ್ಯಕ್ರಮ ಮುಂದೂಡಿದ್ದಾರೆ.

ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಇಷ್ಟು ದಿನಗಳ ಕಾಲ ಇನೋವಾ ಕಾರಿನಲ್ಲಿ ಓಡಾಡುತ್ತಿದ್ದರು. ಆದರೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ​ಗೆ ಅನುಮತಿ ನೀಡಿದ ನಂತರ ರಾಜ್ಯಪಾಲರಿಗೆ ಕೆಲ ಕಾಂಗ್ರೆಸ್​ ನಾಯಕರು ಎಚ್ಚರಿಕೆ ನೀಡಿದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಬಿಗಿ ಭದ್ರತೆ ಒದಗಿಸಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!