ಹೊಸದಿಗಂತ ವರದಿ ಕಲಬುರಗಿ:
ಕೆಇಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದು ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ ಶುಕ್ರವಾರ ಮತ್ತೆ ಕೆಇಎ ಪರೀಕ್ಷೆ ನಡೆದಿದ್ದು, ಅಭ್ಯರ್ಥಿಗಳನ್ನು ಹ್ಯಾಂಡ್ ಮೆಟಲ್ ಡಿಟೆಕ್ಟರ್ ಮೂಲಕ ತಪಾಸಣೆ ಮಾಡಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ವಿವಿಧ ನಿಗಮಗಳಲ್ಲಿ ಖಾಲಿಯಿರುವ ಹುದ್ದೆಗಳಿಗಾಗಿ ಇಂದು ಶನಿವಾರ ಮತ್ತು ನಾಳೆ ಭಾನುವಾರ ರಾಜ್ಯಾದ್ಯಂತ ಕೆಇಎ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು,ತಾಳಿ , ಕಾಲುಂಗುರ ಹೊರತುಪಡಿಸಿ ಎಲ್ಲಾ ರೀತಿಯ ಆಭರಣಗಳಿಗೆ ನಿರ್ಭಂದ ಹೇರಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಾಗುತ್ತಿದೆ.
ಈ ಹಿಂದೆ ನಡೆದ ಪರೀಕ್ಷೆಯಲ್ಲಿ ಕಲಬುರಗಿಯ ಪರೀಕ್ಷಾ ಕೇಂದ್ರದಲ್ಲಿ ಮಹಿಳಾ ಅಭ್ಯರ್ಥಿಯ ಕೊರಳಿನಲ್ಲಿದ್ದ ತಾಳಿಯನ್ನು ತೆಗೆಸುವ ಮೂಲಕ ವಿವಾದಕ್ಕೆ ಕಾರಣವಾಗಿತ್ತು.ಇದೀಗ ತಾಳಿಯೊಂದಿಗೆ ಕಾಲುಂಗುರಕ್ಕೆ ಅವಕಾಶವನ್ನು ನೀಡಿ ಪರೀಕ್ಷೆ ನಡೆಸಲಾಗುತ್ತಿದೆ.
ಅದೇ ರೀತಿ ಇಂದು ನಡೆಯುತ್ತಿರುವ ಕೆಇಎ ಪರೀಕ್ಷೆಯಲ್ಲಿ ಕಿವಿಯಲ್ಲಿ ಬ್ಲೂಟೂತ್ ಡಿವೈಸ್ ಸರ್ಚ್ ಮಾಡಲು ಇ ಆಂಡ್ ಟಿ ವೈದ್ಯರ ನಿಯೋಜನೆ ಮಾಡಲಾಗಿದೆ.