ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಲು ಸಾಲು ಬೆಲೆ ಏರಿಕೆಯಿಂದ ತತ್ತರಿಸಿರೋ ಜನರಿಗೆ ಇದೀಗ ಮತ್ತೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದನ್ನೇ ಅಸ್ತ್ರ ಮಾಡ್ಕೊಂಡ ಬಿಜೆಪಿ, ಇವತ್ತು ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ಮಾಡಿದೆ. ಈ ಬಗ್ಗೆ ಖುದ್ದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಸುದ್ದಿಗೋಷ್ಠಿ ನಡೆಸಿ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಮಲಿಂಗರೆಡ್ಡಿ, ನಾಲ್ಕೂ ಸಾರಿಗೆ ನಿಗಮಗಳು ದರ ಪರಿಷ್ಕರಣೆ ಕೇಳುತ್ತಿದ್ದರು. ಆದ್ರೆ, ಸಮಯ ಕೂಡಿ ಬಂದಿರಲಿಲ್ಲ. 10 ವರ್ಷಕ್ಕಿಂತ ಹೆಚ್ಚು ಕಾಲದಿಂದ ದರ ಪರಿಷ್ಕರಣೆ ಆಗಿರಲಿಲ್ಲ. ಈಗ ಪ್ರತಿದಿನ 13.21 ಕೋಟಿ ಡೀಸೆಲ್ ದರ ವೆಚ್ಚವಿದೆ. ಡೀಸೆಲ್ ಗೆ ಪ್ರತಿದಿನ 4.05 ಕೋಟಿ ರೂ. ಖರ್ಚು ಹೆಚ್ಚಾಗಿದೆ. ಸಿಬ್ಬಂದಿ ವೆಚ್ಚ ಪ್ರತಿದಿನ 5.51 ಕೋಟಿ ಹೆಚ್ಚಳವಾಗಿದೆ.
ಪ್ರತಿದಿನ ಒಟ್ಟು 9.56 ಕೋಟಿ ರೂ. ವೆಚ್ಚ ಹೆಚ್ಚಾಗಿದೆ. ಸರ್ಕಾರ ನಮಗೆ 8800 ಕೋಟಿ ರೂ. ಶಕ್ತಿ ಯೋಜನೆಯಡಿ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.