ನಾಳೆ ರಾಜ್ಯಾದ್ಯಂತ ರಾಮನವಮಿ ಸಂಭ್ರಮ: ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮನವಮಿ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬುಧವಾರ ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬಿಬಿಎಂಪಿ ಪಶುಸಂಗೋಪನಾ ಇಲಾಖೆಯು ರಾಮನವಮಿ ಪ್ರಯುಕ್ತ ನಗರದಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ.

ಬಿಬಿಎಂಪಿ ಸಾಮಾನ್ಯವಾಗಿ ಪ್ರತಿ ಬಾರಿ ಬೆಂಗಳೂರಿನಲ್ಲಿ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಈ ಕ್ರಮಗಳನ್ನು ನಡೆಸಲಾಗುತ್ತದೆ.

ಹಿಂದೂ ಧರ್ಮದಲ್ಲಿ ರಾಮ ನವಮಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ರಾಮನವಮಿಯನ್ನು ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಆಚರಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಇದು ಶ್ರೀರಾಮನ ಜನ್ಮದಿನವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!