EXAM | ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆಯಿರಿ ಮಕ್ಕಳೇ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದಿನಿಂದ ರಾಜ್ಯಾದ್ಯಂತ ಎಲ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಈಗಾಗಲೇ ಪರೀಕ್ಷೆ ಹಾಲ್‌ಗೆ ಆಗಮಿಸಿದ್ದಾರೆ.

ಕರ್ನಾಟಕ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಒಟ್ಟಾರೆ 2,750 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇಂದು ಪರೀಕ್ಷೆ ಆರಂಭವಾಗಿ ಏಪ್ರಿಲ್‌ 4ರಂದು ಕೊನೆಯಾಗಲಿದೆ. ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 4,41,910 ಬಾಲಕರು ಹಾಗೂ 4,28,058 ಬಾಲಕಿಯರು ನೋಂದಣಿ ಮಾಡಿಕೊಂಡಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಸಿಸಿಟಿವಿ ಕ್ಯಾಮರಾ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುತ್ತಿದೆ. ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಬಿಸಿಯೂಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ ಒದಗಿಸಲಾಗಿದೆ.

ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆಯಿರಿ ಮಕ್ಕಳೇ.. All The Best 😊

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!