ಕೆನಡಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಮೇಲೆ ಅವಾಚ್ಯ ಬರಹ, ವಿಷ್ಣು ಪ್ರತಿಮೆ ಭಗ್ನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಹಾತ್ಮ ಗಾಂಧಿಜಿಯವರ ಪ್ರತಿಮೆಯ ಮೇಲೆ ಅವಾಚ್ಯ ಶಬ್ಧಗಳನ್ನು ಬರೆದು, ವಿಷ್ಣು ದೇವಾಲಯದ ಪ್ರತಿಮೆಗಳನ್ನು ಭಗ್ನಗೊಳಿಸಿದ  ಘಟನೆ ಕೆನಡಾದ ಒಂಟಾರಿಯೊದ ರಿಚ್ಮಂಡ್ ಹಿಲ್ ನಗರದಲ್ಲಿ ನಡೆದಿದೆ.
ಕೆನಡಾದ ಒಂಟಾರಿಯೊದ ರಿಚ್ಮಂಡ್ ಹಿಲ್ ನಗರದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯ ಮೇಲೆ ಅವಾಚ್ಯ ಶಬ್ಧಗಳನ್ನು ಬರೆದು ಹಾನಿಗೊಳಿಸಲಾಗಿದೆ. ಯೋಂಗ್ ಸ್ಟ್ರೀಟ್ ನ ಗಾರ್ಡನ್ ಅವೆನ್ಯೂ ಪ್ರದೇಶದಲ್ಲಿನ ವಿಷ್ಣು ಮಂದಿರದಲ್ಲಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಈ ವಿಧ್ವಂಸಕ ಕೃತ್ಯಕ್ಕೆ ಭಾರತ ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದು, ತನಿಖೆಗೆ ಆಗ್ರಹಿಸಿದೆ.
“ರಿಚ್‌ಮಂಡ್ ಹಿಲ್‌ನಲ್ಲಿರುವ ವಿಷ್ಣು ದೇವಾಲಯದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಡಲಾದ ಅವಮಾನದಿಂದ ನಾವು ದುಃಖಿತರಾಗಿದ್ದೇವೆ. ಈ ಕ್ರಿಮಿನಲ್, ದ್ವೇಷಪೂರಿತ, ವಿಧ್ವಂಸಕ ಕೃತ್ಯವು ಕೆನಡಾದ ಭಾರತೀಯ ಸಮುದಾಯದ ಭಾವನೆಗಳನ್ನು ಆಳವಾಗಿ ಘಾಸಿಗೊಳಿಸಿದೆ. ಈ ದ್ವೇಷದ ಅಪರಾಧದ ತನಿಖೆಯ ಸಂಬಂಧ ನಾವು ಕೆನಡಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಟೊರೊಂಟೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಟ್ವೀಟ್ ಮಾಡಿದ್ದಾರೆ.
ಭಾರತೀಯ ಸಮುದಾಯವನ್ನು ಭಯಭೀತಗೊಳಿಸಲು ಪ್ರಯತ್ನಿಸುತ್ತಿರುವ ಈ ದ್ವೇಷದ ಅಪರಾಧದಿಂದ ನಾವು ತೀವ್ರವಾಗಿ ನೊಂದಿದ್ದೇವೆ. ಇದು ಇಲ್ಲಿನ ಭಾರತೀಯ ಸಮುದಾಯದಲ್ಲಿ ಆತಂಕ ಮತ್ತು ಅಭದ್ರತೆಯನ್ನು ಹೆಚ್ಚಿಸಿದೆ. ತನಿಖೆ ನಡೆಸಲು ಮತ್ತು ಅಪರಾಧಿಗಳನ್ನು ತ್ವರಿತವಾಗಿ ಬಂಧಿಸುವುದನ್ನು ಖಚಿತಪಡಿಸಿಕೊಳ್ಳಲು ಭಾತರ ಸರ್ಕಾರವು ಕೆನಡಾ ಸರ್ಕಾರವನ್ನು ಸಂಪರ್ಕಿಸಿದೆ, ”ಎಂದು ಹೈಕಮಿಷನ್ ಟ್ವೀಟ್‌ನಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!