Saturday, September 23, 2023

Latest Posts

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್‌ರ ಭವ್ಯ ಪ್ರತಿಮೆ ಸ್ಥಾಪನೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿಯ ಇಂಡಿಯಾ ಗೇಟ್ ಬಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಜ.23 ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜಯಂತಿ. ಬೋಸ್ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಪ್ರತಿಷ್ಠಾಪಿಸಲಾಗುವುದು ಎಂದಿದ್ದಾರೆ.

ಗ್ರಾನೈಟ್‌ನಿಂದ ಮಾಡಿದ ಭವ್ಯ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಲು ನನಗೆ ಸಂತೋಷವಾಗಿದೆ. ಇದು ಅವರಿಗೆ ಭಾರತದ ಋಣಭಾರದ ಸಂಕೇತವಾಗಿದೆ. ಪ್ರತಿಮೆ ಪ್ರತಿಷ್ಠಾಪನೆ ಪೂರ್ಣಗೊಳ್ಳುವವರೆಗೆ ನೇತಾಜಿಯವರ ಹೊಲೊಗ್ರಾಮ್‌ನ್ನು ಪ್ರತಿಮೆಯ ಸ್ಥಳದಲ್ಲಿ ಪ್ರದರ್ಶಿಸಲಾಗುವುದು. ಜ.23ರಂದು ಹೊಲೊಗ್ರಾಮ್ ಪ್ರತಿಮೆ ಅನಾವರಣಗೊಳಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!