ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣಪತಿ ಮೂರ್ತಿ ಮತ್ತು ನಾಗರ ಕಲ್ಲನ್ನು ಕಿತ್ತೆಸೆದ ಆರೋಪದ ಹಿನ್ನೆಲೆ ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಕಳೆದ ರಾತ್ರಿಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ರಾಷ್ಟ್ರಭಕ್ತರ ಬಳಗದ ಪ್ರಮುಖರು ರಾಗಿಗುಡ್ಡದ ಬಂಗಾರಪ್ಪ ಬಡಾವಣೆಗೆ ಭೇಟಿ ನೀಡಿದ್ದರು. ಸ್ಥಳೀಯರ ಜೊತೆಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚರ್ಚೆ ನಡೆಸಿದರು. ಬಳಿಕ ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಕಟ್ಟಡಗಳನ್ನು ತೆರವು ಮಾಡಬೇಕು ಎಂದು ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಅವರಿಗೆ ಸೋಮವಾರ ಸಂಜೆವರೆಗೆ ಗಡುವು ನೀಡಿದ್ದಾರೆ. ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಸದ್ಯ ಮುಂಜಾಗ್ರತ ಕ್ರವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ