ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ ಜಾಹೀರಾತುಗಳಿಂದ ದೂರವಿರಿ: ಮಾಧ್ಯಮಗಳಿಗೆ ಕೇಂದ್ರ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಜಾಹೀರಾತುಗಳಿಂದ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳು ದೂರವಿರುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೋಮವಾರ ಸೂಚನೆ ನೀಡಿದೆ.
ಆನ್‌ಲೈನ್ ಬೆಟ್ಟಿಂಗ್ ಆರ್ಥಿಕ ಮತ್ತು ಸಾಮಾಜಿಕ-ಆರ್ಥಿಕ ಅಪಾಯವನ್ನುಂಟುಮಾಡುತ್ತದೆ .ಸಾರ್ವಜನಿಕ ಹಿತಾಸಕ್ತಿಯಿಂದ ಈ ಸಲಹೆಯನ್ನು ನೀಡಲಾಗಿದೆ. ಆನ್‌ಲೈನ್ ಬೆಟ್ಟಿಂಗ್ ವೆಬ್‌ಸೈಟ್‌ಗಳು/ಪ್ಲಾಟ್‌ಫಾರ್ಮ್‌ಗಳ ಹಲವಾರು ಜಾಹೀರಾತುಗಳು ಮುದ್ರಣ, ಎಲೆಕ್ಟ್ರಾನಿಕ್, ಸಾಮಾಜಿಕ ಮತ್ತು ಆನ್‌ಲೈನ್ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಬೆಳಕಿಗೆ ಬರುತ್ತಿದ್ದು, ಇದರಿಂದ ದೂರವಿರುವಂತೆ ಎಂದು ಸಚಿವಾಲಯ ಹೇಳಿದೆ.
ಈ ಮೂಲಕ ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಜಾಹೀರಾತು ಪ್ರಕಟಿಸುವುದನ್ನು ತಡೆಯಲು ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಕೇಂದ್ರ ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!