Monday, August 15, 2022

Latest Posts

ಮನೆಯಲ್ಲೇ ಇದ್ದರೆ ಓಡಿಸಬಹುದು ಕೊರೋನಾ: ನಿನ್ನೆ ದಾಖಲಾದ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ನಿನ್ನೆ ಒಂದೇ ದಿನ 2,81,386 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ವರದಿ ಪ್ರಕಾರ, ನಿನ್ನೆ 2,81,386 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,49,65,463ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 35,16,997 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೇ ಒಂದೇ ದಿನ 3,78,741 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,11,74,076ಕ್ಕೆ ಏರಿಕೆಯಾಗಿದೆ. ಭಾನುವಾರ ಒಂದೇ ದಿನ 4,106 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೂ 2,74,390 ಮಂದಿ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss