September 28, 2026
Monday, September 28, 2026
spot_img

ಇ.ಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ತಡೆ: ಸಿಎಂ ದೀದಿ, ಬಂಗಾಳದ ಪೊಲೀಸರಿಗೆ ‘ಸುಪ್ರೀಂ’ ನೊಟೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸುಪ್ರೀಂ ಕೋರ್ಟ್‌ ಇಂದು ಇ.ಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ತಡೆ ನೀಡಿದ್ದು, ಜೊತೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಂಗಾಳದ ಪೊಲೀಸರು ಮತ್ತು ಇತರರಿಗೆ ನೊಟೀಸ್ ನೀಡಿದೆ.

ಐ-ಪಿಎಸಿ ಮೇಲೆ ದಾಳಿ ಸಂಬಂಧ ಇ.ಡಿ ವಿರುದ್ಧವೇ ಎಫ್‌ಐಆರ್‌ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಇಡಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಜಾರಿ ನಿರ್ದೇಶನಾಲಯದ ಮನವಿಯು ಕೇಂದ್ರ ಸಂಸ್ಥೆಗಳ ತನಿಖೆ ಮತ್ತು ರಾಜ್ಯ ಸಂಸ್ಥೆಗಳ ಹಸ್ತಕ್ಷೇಪಕ್ಕೆ ಸಂಬಂಧಿಸಿದ ಗಂಭೀರ ವಿಷಯವನ್ನು ಎತ್ತುತ್ತದೆ ಎಂದು ಹೇಳಿದೆ.

ಬಂಗಾಳ ಸರ್ಕಾರ, ರಾಜ್ಯ ಸಿಎಂ ಮಮತಾ ಬ್ಯಾನರ್ಜಿ, ಡಿಜಿಪಿ ರಾಜೀವ್ ಕುಮಾರ್ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ.

Must Read