ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇನ್ನೂ ಐದು ದಿನ ಮಳೆಯ ಆರ್ಭಟ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು, ಮಲೆನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ. ಮುಂದಿನ ಮೂರ್ನಾಲ್ಕು ದಿನ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಕೆಲವೊಮ್ಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಭಾನುವಾರವಾಗಿದ್ದು, ಜನರು ಹೆಚ್ಚಿನ ಪಕ್ಷ ತಮ್ಮ ಪ್ಲಾನ್‌ಗಳನ್ನು ಕ್ಯಾನ್ಸಲ್ ಮಾಡಿ, ಮನೆಯಲ್ಲೇ ಇರುವ ಸಂಭವ ಜಾಸ್ತಿಯೇ ಇದೆ! ಯಾಕಂದ್ರೆ ವಾತಾವರಣ ಹಾಗಿದೆ!