ಪ್ರಧಾನಿ ಮೋದಿ ಜೊತೆ ಇರುವುದು ಲಂಚಕ್ಕೊಬ್ಬ, ಮಂಚಕ್ಕೊಬ್ಬ: ಡಿ.ಕೆ.ಶಿವಕುಮಾರ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಪ್ರಧಾನಿ ಮೋದಿ ಹೇಳಿಕೆಗೆ ಕಿಡಿಕಾರಿರುವ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ. ಪ್ರಧಾನಿ ಮೋದಿ ಜೊತೆ ಇರುವುದು ಲಂಚಕ್ಕೊಬ್ಬ, ಮಂಚಕ್ಕೊಬ್ಬ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪವನ್ನು ಪ್ರಧಾನಿ ಮೋದಿ ಮಾಡುತ್ತಿದ್ದಾರೆ. ಇವರ ಸರ್ಕಾರದಲ್ಲಿರುವ ಭ್ರಷ್ಟ ಮಂತ್ರಿಗಳ ಬಗ್ಗೆ ದೇಶ, ರಾಜ್ಯ ನೋಡುತ್ತಿದೆ. ಭ್ರಷ್ಟ ಸರ್ಕಾರ, ಮಂತ್ರಿಗಳ ಜೊತೆಯೇ ಮೋದಿ ಇರುವುದು. ಅಂತಹವರಿಗೆ ಮಾತ್ರ ಬಿಜೆಪಿ ಟಿಕೆಟ್ ನೀಡಿರುವುದು ಎಂದು ಗುಡುಗಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!