ಧೋನಿ ಮಲಗಿದ್ದಾಗ ಕದ್ದು ಫೋಟೋ ಕ್ಲಿಕ್ ಮಾಡಿದ ಗಗನಸಖಿ: ನೆಟ್ಟಿಗರಿಂದ ಸಿಕ್ತು ಕ್ಲಾಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಟೀಂ ಇಂಡಿಯಾದ (Team India) ಮಾಜಿ ನಾಯಕ ಎಂ.ಎಸ್ ಧೋನಿ (MS Dhoni) ಕ್ರಿಕೆಟ್ ನಿಂದ ದೂರ ಇದ್ದರೂ ಕೋಟ್ಯಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ.

ಅಭಿಮಾನಿಗಳು ಒಮ್ಮೆಯಾದ್ರೂ ಮಾಹಿ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಬೇಕೆಂಬ ತವಕದಲ್ಲಿರುತ್ತಾರೆ. ಇದೀಗ ಗಗನಸಖಿಯೊಬ್ಬಳು ಮಾಹಿ ಜೊತೆ ಫೋಟೋದಲ್ಲಿ ಸೆರೆಹಿಡಿಯಲು ಹೋಗಿ ಸುದ್ದಿಯಾಗಿದ್ದಾಳೆ.

ಇತ್ತೀಚೆಗೆ ವಿಮಾನ ಪ್ರಯಾಣ ಸಮಯದಲ್ಲಿ MSD ಪಕ್ಕದಲ್ಲಿ ನಿಂತು ಗಗನ ಸಖಿಯೊಬ್ಬಳು (Air Hostess) ಫೋಟೋ ತೆಗೆದುಕೊಂಡಿದ್ದಾಳೆ. ಆದ್ರೆ ಈ ಫೋಟೋ ತೆಗೆದುಕೊಳ್ಳುವಾಗ ಧೋನಿ ಸಣ್ಣ ನಿದ್ರೆಗೆ ಜಾರಿದ್ದರು. ಹಾಗಾಗಿ ಇದು ಅವರಿಗೆ ಗೊತ್ತೇ ಇರಲಿಲ್ಲ.

ಇದೀಗ ಈ ಫೋಟೋ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಗಗನಸಖಿ ವಿರುದ್ಧ ಕಿಡಿ ಕಾರಿದ್ದಾರೆ.

ಒಬ್ಬ ಅಭಿಮಾನಿಯಾಗಿ ಅವರ ಅನುಮತಿಯಿಲ್ಲದೇ ಅವರ ಪರ್ಸನಲ್ ಸ್ಪೇಸ್‌ಗೆ ಅಡ್ಡಿಪಡಿಸಲು ಬಯಸುವುದಿಲ್ಲ. ಇನ್ಮುಂದೆ ಹೀಗೆ ಮಾಡ್ಬೇಡಿ ಅಂತಾ ಅಭಿಮಾನಿಯೊಬ್ಬರು ಕೇಳಿಕೊಂಡಿದ್ದಾರೆ.

ಮತ್ತೊಬ್ಬರು, ಧೋನಿ ಜಾಗದಲ್ಲಿ ಯುವತಿ, ಗಗನಸಖಿ ಜಾಗದಲ್ಲಿ ಧೋನಿ ಇದ್ದರೆ ಇಷ್ಟು ಹೊತ್ತಿಗೆ ಮಹಿಳಾ ಹೋರಾಟಗಾರರು ಕಟು ಪದಗಳಲ್ಲಿ ಟೀಕೆ ಮಾಡುತ್ತಿದ್ದರು ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here