Wednesday, October 22, 2025

ದೀಪಾವಳಿ ಪಟಾಕಿ ಅವಘಡ ತಡೆಗೆ ಕ್ರಮ: ಬೆಂಗಳೂರಿನ ಮಿಂಟೋ, ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ 24×7 ವಿಶೇಷ ವಾರ್ಡ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳು ನಡೆಯುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಿಂಟೋ ಆಸ್ಪತ್ರೆ ಸಜ್ಜಾಗಿದ್ದು, ದಿನದ 24 ಗಂಟೆಯೂ ಸೇವೆ ಒದಗಿಸಲಿದೆ.

ಪಟಾಕಿ ಸಿಡಿತದಿಂದ ಕಣ್ಣಿಗೆ ತೊಂದರೆಯಾದರೆ ಕೂಡಲೇ ಚಿಕಿತ್ಸೆ ನೀಡಲು ಮಿಂಟೋ ನೇತ್ರಾಲಯ ಆಸ್ಪತ್ರೆ ಸಜ್ಜಾಗಿದೆ. ಪುರುಷರಿಗೆ 10, ಮಹಿಳೆಯರಿಗೆ 10, ಮಕ್ಕಳಿಗಾಗಿ 15 ಸೇರಿ ಒಟ್ಟು ಬೆಡ್‌ಗಳನ್ನು ಒಳರೋಗಿಗಳಿಗಾಗಿ ಮೀಸಲಿಡಲಾಗಿದೆ.

ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೆ.ಆರ್. ಆಸ್ಪತ್ರೆಯಲ್ಲಿ ಪಟಾಕಿ ಸ್ಫೋಟದಿಂದ ಗಾಯಗೊಂಡವರ ಚಿಕಿತ್ಸೆಗೆ ವಿಶೇಷ ವಾರ್ಡ್ ಸ್ಥಾಪಿಸಲಾಗಿದೆ. ಈ ವಾರ್ಡ್‌ನಲ್ಲಿ 15 ಬೆಡ್‌ಗಳನ್ನು ಮೀಸಲು ಮಾಡಲಾಗಿದೆ.

ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆಗೆ ಅಗತ್ಯವಿರುವ ವೈದ್ಯರು ಮತ್ತು ಸಿಬ್ಬಂದಿಯನ್ನು ನಿರಂತರ ಸೇವೆಗೆ ನಿಯೋಜಿಸಲಾಗಿದೆ. ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಆಸ್ಪತ್ರೆ ಆಡಳಿತವು ಪರಿಸ್ಥಿತಿಗೆ ಅನುಗುಣವಾಗಿ ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ವ್ಯವಸ್ಥೆ ಮಾಡಿದೆ. ಜನರು ಪಟಾಕಿ ಸಿಡಿಸುವಾಗ ಎಚ್ಚರಿಕೆ ವಹಿಸಬೇಕು ಅದರಲ್ಲೂ ಸಣ್ಣ ಮಕ್ಕಳು ಪಟಾಕಿ ಸಿಡಿಸುವಾಗ ಪೋಷಕರು ಅವರ ಪಕ್ಕದಲ್ಲೇ ಇದ್ದು ಜಾಗ್ರತೆ ವಹಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

error: Content is protected !!