ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, June 24, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೋಲಾರ ಜಿಲ್ಲೆಯಲ್ಲಿ ಲಾಕ್‌ಡೌನ್ ಬಿಗಿಗೊಳಿಸಲು ಕ್ರಮ: ಉಸ್ತುವಾರಿ ಸಚಿವ ಲಿಂಬಾವಳಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ,  ಕೋಲಾರ:

ಜಿಲ್ಲೆಯಲ್ಲಿ ಕೋಲಾರ, ಮಾಲೂರು, ಕೆಜಿಎಫ್ ತಾಲೂಕುಗಳಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಲಾಕ್‌ಡೌನ್  ಮತ್ತಷ್ಟು ಬಿಗಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.
ನಗರ ಹೊರವಲಯದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ನಡೆದ ವಿಡಿಯೋ ಕಾನ್ಫ್‌ರೆನ್ಸ್‌ನಲ್ಲಿ ಭಾಗವಹಿಸಿದ್ದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.
ಸೋಂಕು ತಡೆಗೆ ಕಠಿಣ ಕ್ರಮಗಳ ಅಗತ್ಯವಿದೆ, ಈ ಹಿನ್ನೆಲೆಯಲ್ಲಿ ಆ ತಾಲೂಕುಗಳಲ್ಲಿ ಲಾಕ್‌ಡೌನ್ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸುವ ಸಂಬಂಧ ರೂಪುರೇಷೆ ಸಿದ್ದಪಡಿಸಲಾಗುತ್ತಿದೆ ಎಂದರು.
ಪ್ರತಿದಿನ100 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದೃಢಪಡುವ ದೇಶದ 463 ಆಯ್ದ ಜಿಲ್ಲೆಗಳ ಉಸ್ತುವಾರಿ ಸಚಿವರು, ಡಿಸಿಗಳೊಂದಿಗೆ ಚರ್ಚೆ ನಡೆಸಿ ಹಲವು ನಿರ್ದೇಶನಗಳನ್ನು ಪ್ರಧಾನಿ, ಗೃಹ ಸಚಿವರು ನೀಡಿದ್ದಾರೆ ಎಂದರು.
ಕರ್ನಾಟಕದಲ್ಲಿ ಕೋಲಾರ ಸೇರಿದಂತೆ 17 ಜಿಲ್ಲೆಯವರು ಭಾಗವಹಿಸಿದ್ದು, ಪ್ರಧಾನಿಯೊಂದಿಗಿನ ಸಂವಾದದ ಬಳಿಕ ನಾವೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಹಲವು ತೀರ್ಮಾನ ಮಾಡಿರುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ಹೋಂ ಐಸೋಲೇಶನ್‌ನಲ್ಲಿರುವ 5000ಕ್ಕಿಂತಲೂ ಹೆಚ್ಚು ಮಂದಿಯನ್ನು ಪ್ರತಿದಿನ ದೂರವಾಣಿ ಕರೆ ಮೂಲಕ ವಿಚಾರಿಸಬೇಕು. ಪ್ರತಿ ಗ್ರಾಮದಲ್ಲಿ ಟಾಸ್ಕ್ ಪೋರ್ಸ್ ನಡೆಸಿ ಆ ಭಾಗದ ಸದಸ್ಯರು, ಗ್ರಾಪಂನವರು ಸೋಂಕಿತರ ಮಾಹಿತಿ ನೀಡಬೇಕು ಎಂದರು.
ಮನೆಯಲ್ಲಿಯೇ ಇರುತ್ತಾರಾ ಅಥವಾ ಹೊರಗೆ ಓಡಾಡುತ್ತಾರಾ ಎನ್ನುವುದನ್ನು ಪರಿಶೀಲಿಸಿ ಓಡಾಡುವವರನ್ನು ಕೋವಿಡ್ ಕೇರ್ ಸೆಂಟರ್‌ಗೆ ಕರೆ ತರಲು ಚಿಂತಿಸಿದ್ದು, ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆಯನ್ನು ಕ್ರಮೇಣ ಕಡಿಮೆಯಾಗಿಸಲು ಅಗತ್ಯ ಕ್ರಮಕೈಗೊಳ್ಳಲಿದ್ದೇವೆ ಎಂದರು.
ಕೊರೊನಾ ಗ್ರಾಮ ಮಟ್ಟದ ಟಾಸ್ಕ್ ಪೋರ್ಸ್‌ನಲ್ಲಿ ಪಕ್ಷ ಬೇಧ ಮರೆತು ಕೈಜೋಡಿಸಬೇಕು. ಕೊರೊನಾ ಮುಕ್ತ ಗ್ರಾಮವಾಗಿಸಲು ಗುರಿ ನೀಡಲಾಗುವುದು.
ಖಾಸಗಿ ಕೋವಿಡ್ ಕೇರ್ ಸೆಂಟರ್ ನೀಡಲು ಸರಕಾರ, ಜಿಲ್ಲಾಡಳಿತವು ಅನುಮತಿ ನೀಡಲಿದೆ ಎಂದರು.
ಅಸೋಷಿಯೇಷನ್, ಎನ್‌ಜಿಒ, ಆಶ್ರಮ ಸೇರಿದಂತೆ ಯಾರೇ ಮುಂದೆ ಬಂದರೂ ಅನುಮತಿ ನೀಡಲಾಗುವುದು. ನಂಬಿಕೆಗೆ ಇಂತಹ ಸಂಸ್ಥೆಗಳು ಅರ್ಹರಾಗಿರುವ  ಹಿನ್ನೆಲೆಯಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಆರೋಗ್ಯ ಸೇವೆಗೆ ಅವರು ಬಳಸಿಕೊಳ್ಳುವ ವೈದ್ಯರು, ಸಿಬ್ಬಂದಿಗೆ ಗೌರವ ಧನವನ್ನು ನೀಡಲು ಸರಕಾರ ಸಿದ್ಧವಾಗಿದೆ ಎಂದು ತಿಳಿಸಿದರು.
ಅಲ್ಲದೆ ಕೋವಿಡ್ ಸಂದರ್ಭದಲ್ಲಿ ಸುಮಾರು 30 ಕಂಪನಿಗಳು ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಸೇವೆಯಡಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಬ್ಬ
ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲು ಡಿಸಿ ಸೂಚನೆ ನೀಡಲಿದ್ದಾರೆ. ಒಂದು ವೇಳೆ ಹೆಚ್ಚಿನ ಮಂದಿಗೆ ಪಾಸಿಟಿವ್ ಬಂದರೆ ಅಲ್ಲಿಯೇ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸೂಚಿಸಲಾಗುವುದು ಎಂದರು.

ಬ್ಲಾಕ್ ಫಂಗಸ್‌ಗೆ 30 ಬೆಡ್ ವಾರ್ಡ್

ಆರ್‌ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ 7-8 ಮಂದಿಗೆ ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. 30 ಬೆಡ್‌ಗಳ ಬ್ಲ್ಯಾಕ್ ಫಂಗಸ್ ವಾರ್ಡ್ ಶೀಘ್ರದಲ್ಲೇ ಆರಂಭಿಸಲು ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ. ಬಿಪಿಎಲ್ ಕಾರ್ಡ್‌ನವರಿಗೆ ಉಚಿತ ಚಿಕಿತ್ಸೆ, ಔಷಧಿ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
ಅದಕ್ಕೆ ರಾಜ್ಯದ ಆರೋಗ್ಯ ಇಲಾಖೆಯ ಮೂಲಕ ಔಷಧಿಗಳನ್ನು ವ್ಯವಸ್ಥೆ ಮಾಡಬೇಕಿದೆ. ದೇಶದೆಲ್ಲೆಡೆ ಔಷಧಿ ಕೊರತೆಯಿದ್ದು, ಶಕ್ತಿ ಮೀರಿ ಪ್ರಯತ್ನಿಸಿ ಇಲ್ಲಿಗೆ ಸಾಧ್ಯವಾದಷ್ಟು ಔಷಧಿಗಳನ್ನು ಸರಬರಾಜು ಮಾಡಿಸಲಾಗುವುದು ಎಂದರು.
ಎಸ್ಸೆನ್ನಾರ್ ಜಿಲ್ಲಾಸ್ಪತ್ರೆಯಲ್ಲಿ ಪ್ರತಿದಿನ 1200-1500 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಇದನ್ನು 1800ಕ್ಕೆ ಏರಿಸಲಾಗುವುದು. ಹಾಗೆಯೇ ಕೆಜಿಎಫ್‌ನ ಸಂಭ್ರಮ್ ಆಸ್ಪತ್ರೆಯ ಪ್ರಯೋಗಾಲಯವನ್ನು ಜಿಲ್ಲಾಡಳಿತ
ಪಡೆದುಕೊಂಡಿದ್ದು, ಅಲ್ಲಿಯೂ ಸಾವಿರ ಮಂದಿ, ಆರ್‌ಎಲ್ ಜಾಲಪ್ಪದಲ್ಲಿ 300 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.
ಸಾಧ್ಯವಾದರೆ ಮತ್ತಷ್ಟು ಪರೀಕ್ಷೆ ಮಾಡಿಸಲಾಗುವುದು. ಒಟ್ಟಾರೆ 4000 ಮಂದಿಗೆ ಪ್ರತಿದಿನ ಪರೀಕ್ಷೆ ಮಾಡಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ನಡೆದಿರುವ ಚರ್ಚೆಯಲ್ಲಿ 2ನೇ ಲಸಿಕೆ ಹಾಕಿಸಿಕೊಳ್ಳದೇ ಇರುವವರಿಗೆ ಮೊದಲ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಕೋ ವ್ಯಾಕ್ಸಿನ್ ಹಾಕಿಸಿಕೊಂಡಿರುವವರು ಸಮೀಪದ ಪಿಎಚ್‌ಸಿಗಳನ್ನು ಸಂಪರ್ಕಿಸಿದರೆ 2-3 ದಿನಗಳಲ್ಲಿ ವ್ಯವಸ್ಥೆ ಮಾಡಲಾಗುವುದು.
ಇನ್ನು ಕೋವಿಶೀಲ್ಡ್‌ ಅನ್ನು 45 ವರ್ಷ ಮೇಲ್ಪಟ್ಟ ಎಲ್ಲರಿಗೂ ನೀಡಲಾಗುವುದು. ೨ನೇ ಲಸಿಕೆಗೆ ಕಾಯುತ್ತಿರುವವರಿಗೆ ಮಾತ್ರವೇ ಕೋವ್ಯಾಕ್ಸಿನ್ ನೀಡಲಾಗುವುದು ಎಂದರು.
ವಿಡಿಯೋ ಕಾನ್ಫ್‌ರೆನ್ಸ್‌ನಲ್ಲಿ ಡಿಸಿ ಡಾ.ಆರ್.ಸೆಲ್ವಮಣಿ, ಜಿಪಂ ಸಿಇಒ ಎನ್.ಎಂ.ನಾಗರಾಜ್, ಎಸ್ಪಿಗಳಾದ ಕೋಲಾರ ಕಾರ್ತಿಕ್‌ರೆಡ್ಡಿ, ಕೆಜಿಎಫ್ ಇಲಕ್ಕೀಯಾ ಕರುಣಾಕರನ್, ಎಡಿಸಿ ಡಾ.ಸ್ನೇಹಾ ತಹಸೀಲ್ದಾರ್ ಶೋಭಿತಾ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss