ಕೆರೆಗಳನ್ನು ತುಂಬಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು: ಸಚಿವ ಎನ್.ಎಸ್.ಬೋಸರಾಜು

ಹೊಸದಿಗಂತ ವರದಿ ರಾಯಚೂರು :

ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆಗೆ 1.5 ಟಿಎಂಸಿ ನೀರನ್ನು ಬಿಡಲಾಗಿದೆ. ಈ ನೀರಿನಿಂದ ಜಿಲ್ಲೆಯಲ್ಲಿರುವ ಈ ಭಾಗದ ಎಲ್ಲ ಕೆರೆಗಳನ್ನು ತುಂಬಿಸುವುದಕ್ಕೆ ಕ್ರಮಕೈಗೊಳ್ಳಲಾಗುವುದು. ಇದರಿಂದ ಜಿಲ್ಲೆಯಲ್ಲಿನ ಕಾಲುವೆಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ಮುಂದಿನ 3 ತಿಂಗಳುಗಳ ಕಾಲ ನೀರಿನ ತೊಂದರೆ ಆಗುವುದಿಲ್ಲ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.

ನಗರದ ಕೃಷಿ ವಿವಿಯಲ್ಲಿ ಆಯೋಜಿಸಿದ್ದ ಸಿರಿಧಾನ್ಯಗಳ ಮೌಲ್ಯ ಸರಪಳಿ ಉದ್ಯಾನದ ಶಂಕುಸ್ಥಾನೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಈ ಹಿಂದೆ ಜಲಾಶಯಗಳಲ್ಲಿ ಹೆಚ್ಚಿನ ನೀರು ಇರುತ್ತಿದ್ದುದರಿಂದ ಜಲಾಶಯಗಳಲ್ಲಿ ನೀರಿನ ಸೋರಿಕೆಗಳನ್ನು ಅಷ್ಟೊಂದು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಇದರಿಂದ ಕೆಳಭಾಗಗಳಲ್ಲಿ ನೀರಿನ ಕೊರತೆ ಆಗುತ್ತಿರಲಿಲ್ಲ. ಈಗ ಜಲಾಶಯಗಳಲ್ಲಿನ ಸೋರಿಕೆಗಳನ್ನು ಸಂಪೂರ್ಣವಾಗಿ ತಡೆದಿದ್ದುದರಿಂದ ಪ್ರಸ್ತುತ ನೀರಿನ ಕೊರತೆ ಆಗುತ್ತಿದೆ ಇದರ ನಿವಾರಣೆಗೆ ಎಲ್ಲಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಪ್ರಸಕ್ತ ಬೇಸಿಗೆಯಲ್ಲಿ ಆಗುವ ಕುಡಿಯುವ ನೀರಿನ ತೊಂದರೆಯನ್ನು ನಿವಾರಿಸುವುದಕ್ಕೆ ಜಿಲ್ಲಾಧಿಕಾರಿ, ತಹಶೀಲ್ದಾರಗಳಿಗೆ ಸರ್ಕಾರ ಇಗಾಗಲೇ ಅನುದಾನವನ್ನು ನೀಡಿದೆ. ಇದಕ್ಕಾಗಿ ಸರ್ಕಾರ 851 ಕೋಟಿ ಕುಡಿಯುವ ನಿರು ಮತ್ತು ಮೇವಿಗಾಗಿ ನೀಡಲಾಗಿದೆ. ಈ ವಿಷಯಗಳಲ್ಲಿ ಯಾವುದೇ ತೊಂದರೆ ಆದರು ಆಯಾ ಡಿಸಿ, ತಹಶಿಲ್ದಾರಗಳನ್ನು ಹಒಣೆಗಾರರನ್ನಾಗಿ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಕಟ್ಟುನಿಟ್ಟಾಗಿ ಆದೇಶಿಸಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!