ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ನಲ್ಲಿ ಸೋತ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಸ್ಟೀವ್ ಸ್ಮಿತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.

ಸೆಮಿಫೈನಲ್ ಪಂದ್ಯದಲ್ಲಿ 71 ರನ್ ಬಾರಿಸಿ ಮಿಂಚಿದ್ದರು. ಇದಾಗ್ಯೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಿರಲಿಲ್ಲ. ಈ ಸೋಲಿನ ಬೆನ್ನಲ್ಲೇ ಸ್ಮಿತ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಗಾಯದ ಕಾರಣ ಟೂರ್ನಿಗೆ ಅಲಭ್ಯರಾದ ಹಿನ್ನಲೆ ಸ್ಮಿತ್ ಅವರಿಗೆ ನಾಯಕತ್ವ ನೀಡಲಾಗಿತ್ತು. ಅದರಂತೆ ಸೆಮಿಫೈನಲ್​ವರೆಗೆ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಿದ್ದ ಸ್ಮಿತ್ ಇದೀಗ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!