ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರ್ ಇಂಡಿಯಾ ಗಗನಸಖಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ (Mumbai Murder Accused) ಅಂಧೇರಿ ಠಾಣೆಯ (Andheri Police Station) ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನ ಮರೋಲ್ ಪ್ರದೇಶದಲ್ಲಿರುವ ಫ್ಲಾಟ್‌ನಲ್ಲಿ 23 ವರ್ಷದ ಗಗನಸಖಿಯ (Air Hostess) ಕತ್ತು ಸೀಳಿ ಕೊಂದಿದ್ದ ಆರೋಪಿ ವಿಕ್ರಮ್ ಅತ್ವಾಲ್ (40) ಅನ್ನು ಪೊಲೀಸರು ಬಂಧಿಸಿದ್ದರು.ತನಿಖೆಯ ಸಮಯದಲ್ಲಿ ಮಹಿಳೆ ತನ್ನ ಸಹೋದರಿ, ತದನಂತರ ಗೆಳೆಯನೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದದ್ದು ತಿಳಿದುಬಂದಿದೆ. ಆದರೆ ಇಬ್ಬರೂ ಎಂಟು ದಿನಗಳ ಹಿಂದೆ ತಮ್ಮ ಸ್ವಂತ ಸ್ಥಳಕ್ಕೆ ತೆರಳಿದ್ದರು. ಆದರೆ, ಇದೀಗ ಈ ಘಟನೆ ನಡೆದಿರುವುದಾಗಿ ಪೊಲೀಸರು ಹೇಳಿದ್ದರು.
ಛತ್ತೀಸ್‌ಗಢ ಮೂಲದ ರೂಪಲ್ ಓಗ್ರೆ (Rupal Ogrey), ಏರ್ ಇಂಡಿಯಾದಲ್ಲಿ ತರಬೇತಿಗೆ ಆಯ್ಕೆಯಾಗಿದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈಗೆ ಸ್ಥಳಾಂತರಗೊಂಡಿದ್ದರು. ಕೆಲವು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ ತನ್ನ ಸಹೋದರಿ ಮತ್ತು ತನ್ನ ಗೆಳೆಯನೊಂದಿಗೆ ಅಂಧೇರಿಯ ಪ್ಲಶ್ ಹೌಸಿಂಗ್ ಸೊಸೈಟಿಯಲ್ಲಿ ತನ್ನ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು.
ಮುಂಬೈನಲ್ಲಿರುವ ತನ್ನ ಫ್ಲಾಟ್‌ನಲ್ಲಿ ಗಗನಸಖಿ ಭಾನುವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದಳು.