ಅಮೃತಸರದಲ್ಲಿ ಡ್ರೋನ್ ಆತಂಕ: ಆರೋಪಿ ಎಸ್‌ಟಿಎಫ್  ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಂಜಾಬ್ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಚೀನಾ ನಿರ್ಮಿತ ಡ್ರೋನ್, 1.6 ಕೆಜಿ ಹೆರಾಯಿನ್, ಪಿಸ್ತೂಲ್ ಮತ್ತು ರೈಫಲ್‌ನೊಂದಿಗೆ ವಾಂಟೆಡ್ ಆರೋಪಿಯನ್ನು ಬಂಧಿಸಿದೆ. ಆರೋಪಿಗಳನ್ನು ಲಕ್ಭಿರ್ ಸಿಂಗ್ ಅಲಿಯಾಸ್ ಲಾಖಾ ಎಂದು ಗುರುತಿಸಲಾಗಿದೆ.

ಕಾರ್ಯಾಚರಣೆ ಆರಂಭಿಸಲಾಗಿದ್ದು, ಲಕ್ಭೀರ್ ಸಿಂಗ್ ಅಲಿಯಾಸ್ ಲಖಾ ಎಂಬ ವಾಂಟೆಡ್ ಆರೋಪಿಯನ್ನು ಬಂಧಿಸಲಾಗಿದೆ. ಆತನ ಬಳಿಯಿಂದ ಚೀನಾ ನಿರ್ಮಿತ ಡ್ರೋನ್, 1.6 ಕೆಜಿ ಹೆರಾಯಿನ್, ಪಿಸ್ತೂಲ್ ಮತ್ತು ರೈಫಲ್ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಟಿಎಫ್ ಎಐಜಿ ಸ್ನೇಹದೀಪ್ ಶರ್ಮಾ ತಿಳಿಸಿದ್ದಾರೆ.

ಆರೋಪಿಯ ವಿಚಾರಣೆ ವೇಳೆ ಆತ ಸುದೀರ್ಘ ಕಾಲದಿಂದ ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡುತ್ತಿದ್ದು, ಪಾಕಿಸ್ತಾನಿ ಸ್ಮಗ್ಲರ್‌ಗಳ ಜತೆಗಿನ ಸಂಪರ್ಕವನ್ನು ಬಹಿರಂಗಪಡಿಸಿದ್ದಾನೆ ಎಂದು ಶರ್ಮಾ ಹೇಳಿದ್ದಾರೆ.

ಸೋಮವಾರ, ಪಂಜಾಬ್‌ನ ಅಮೃತಸರದ ಅಂತರಾಷ್ಟ್ರೀಯ ಗಡಿಯಲ್ಲಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಪಡೆಗಳು ಹೊಡೆದುರುಳಿಸಿದವು ಎಂದು ಬಿಎಸ್‌ಎಫ್ ಅಧಿಕಾರಿ ತಿಳಿಸಿದ್ದಾರೆ.
ಶೋಧದ ವೇಳೆ ಹೆರಾಯಿನ್ ಎಂದು ಶಂಕಿಸಲಾದ ಎರಡು ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪಂಜಾಬ್‌ನ ಅಮೃತಸರದ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಬಿಎಸ್‌ಎಫ್ ಹೊಡೆದುರುಳಿಸಿದೆ. ಬಿಒಪಿ ರಾಜತಾಲ್ ಪ್ರದೇಶದಲ್ಲಿ ಬಿಎಸ್‌ಎಫ್‌ನ 144 ಕಾರ್ಪ್ಸ್ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಅದರಲ್ಲಿ ಡ್ರೋನ್ ಹೊಡೆದುರುಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!