ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಗಣರಾಜ್ಯೋತ್ಸವಕ್ಕೆ ಕರುನಾಡಿನ ಸ್ತಬ್ಧಚಿತ್ರ ಆಯ್ಕೆ ಆಗದಿರುವುದನ್ನೇ ಮುಂದಿಟ್ಟುಕೊಂಡು ಕೀಳುಮಟ್ಟದ ರಾಜಕಾರಣ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧಚಿತ್ರವನ್ನು ಆಯ್ಕೆ ಮಾಡದೆ ಕರುನಾಡಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂಬ ಸಿದ್ದರಾಮಯ್ಯ ಟೀಕೆಗೆ ಜೋಶಿ ಅವರು ತಮ್ಮ ಎಕ್ಸ್‌ ಸಾಮಾಜಿಕ ಜಾಲತಾಣದ ಮೂಲಕ ಪ್ರತ್ಯುತ್ತರ ಕೊಟ್ಟಿದ್ದಾರೆ.

ಸಿದ್ದರಾಮಯ್ಯನವರೇ ರಾಜಕೀಯ ಮಾಡಬೇಕು ನಿಜ. ಆದರೆ ಎಲ್ಲದರಲ್ಲೂ ರಾಜಕೀಯ ಮಾಡುವುದು, ಸುಳ್ಳು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸುವುದು ನಿಮಗಾಗಲಿ, ನಿಮ್ಮ ಸ್ಥಾನಕ್ಕಾಗಲಿ ಶೋಭೆ ತರದು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!