ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆನಡಾದ ಬ್ರ್ಯಾಂಪ್ಟನ್ ನಲ್ಲಿ ನಡೆದ ಪರೇಡ್ ನಲ್ಲಿ ಖಲಿಸ್ತಾನ ಸಂಘಟನೆಯು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಪ್ರದರ್ಶಿಸಿದೆ.
ಈ ಘಟನೆ ಬೆನ್ನಲ್ಲೇ ಭಾರದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮತಬ್ಯಾಂಕ್ ರಾಜಕಾರಣಕ್ಕಾಗಿ ಈ ರೀತಿ ಉಗ್ರ ಸಂಘಟನೆಗಳ ಚಟುವಟಿಕೆಗೆ ಅವಕಾಶ ನೀಡುವುದು ತಪ್ಪು. ಇದು ಖಲಿಸ್ತಾನಕ್ಕೆ ಮಾತ್ರವಲ್ಲ, ಭವಿಷ್ಯದಲ್ಲಿ ದ್ವಿಪಕ್ಷೀಯ ಸಂಬಂಧಗಳ ಕಾರಣಗಳಿಂದ ಕೆನಾಡಾಗೂ ಒಳ್ಳಯದಲ್ಲ ಎಂದು ಎಚ್ಚರಿಸಿದ್ದಾರೆ.
ಇದು ಅತ್ಯಂತ ಗಂಭೀರ ಸಮಸ್ಯೆಯಾಗಿದೆ. ಪ್ರತ್ಯೇಕವಾದಿಗಳಿಗೆ, ಉಗ್ರಗಾಮಿಗಳಿಗೆ, ಹಿಂಸಾಚಾರವನ್ನು ಪ್ರತಿಪಾದಿಸುವ ಜನರಿಗೆ ಜಾಗ ನೀಡಲಾಗಿದೆ. ಅವರ ಚಟುವಟಿಕೆಗೆ ಅವಕಾಶ ನೀಡಲಾಗಿದೆ. ಇದು ಕೆನಡಾಗೆ ಒಳ್ಳೆಯದಲ್ಲ. ಭಾರತದ ಜೊತೆಗಿನ ಸಂಬಂಧಕ್ಕೆ ಧಕ್ಕೆಯಾಗಲಿದೆ ಎಂದು ಜೈಶಂಕರ್ ಹೇಳಿದ್ದಾರೆ.
ಇದೀಗಭಾರತದಲ್ಲಿರುವ ಕೆನಡಾದ ಹೈ ಕಮಿಷನರ್ ಕೆಮರಾನ್ ಮ್ಯಾಕೆ ಈ ಬಗ್ಗೆ ಮಾಹಿತಿ ನೀಡಿದ್ದು, ತಮ್ಮ ದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತದ ಮಾಜಿ ಪ್ರಧಾನಿಯೊಬ್ಬರ ಹತ್ಯೆಯನ್ನು ಸಂಭ್ರಮಿಸಿರುವುದರ ವರದಿಗಳನ್ನು ಕಂಡು ಗಾಬರಿಯಾಯಿತು ಎಂದು ಹೇಳಿದ್ದಾರೆ.ಕೆನಡಾದಲ್ಲಿ ದ್ವೇಷ ಅಥವಾ ಹಿಂಸೆಯ ವೈಭವೀಕರಣಕ್ಕೆ ಯಾವುದೇ ಆಸ್ಪದವಿಲ್ಲ. ನಾನು ಇಂತಹ ಚಟುವಟಿಕೆಗಳನ್ನು ಖಂಡಿಸುತ್ತೇನೆ ಎಂದು ಮ್ಯಾಕೆ ಟ್ವೀಟ್ನಲ್ಲಿ ತಿಳಿಸಿದ್ದಾರೆ.