July 3, 2026
Friday, July 3, 2026
spot_img

ಶಾಲಾ ವಠಾರದಲ್ಲಿ ‘ಸ್ಟಿಂಗ್’ ಎನರ್ಜಿ ಡ್ರಿಂಕ್ ಮಾರಾಟ ನಿಷೇಧ: ಮಕ್ಕಳ ಆರೋಗ್ಯ ಕಾಳಜಿಗೆ ಸರ್ಕಾರದಿಂದ ಮಹತ್ವದ ಹೆಜ್ಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮಹಾರಾಷ್ಟ್ರ ಸರ್ಕಾರವು ಒಂದು ಮಹತ್ವದ ಘೋಷಣೆ ಮಾಡಿದೆ. ಮಕ್ಕಳ ಆರೋಗ್ಯಕ್ಕೆ ಸೂಕ್ತವಲ್ಲದ ಪದಾರ್ಥಗಳು ಇವೆ ಎಂಬ ಕಳಕಳಿಯ ಹಿನ್ನೆಲೆಯಲ್ಲಿ, ಶಾಲಾ ಆವರಣದ 500 ಮೀಟರ್ ವ್ಯಾಪ್ತಿಯಲ್ಲಿ ‘ಸ್ಟಿಂಗ್’ ಎನರ್ಜಿ ಡ್ರಿಂಕ್ ಮತ್ತು ಇತರ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ.

ವಿಧಾನಸಭೆಯಲ್ಲಿ ಸಚಿವರ ಘೋಷಣೆ

ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ವಿಕ್ರಮ್ ಪಾಚ್ಪುತೆ ಕೇಳಿದ ಪ್ರಶ್ನೆಗೆ ಆಹಾರ ಮತ್ತು ಔಷಧ ಆಡಳಿತ ಸಚಿವ ನರಹರಿ ಜಿರ್ವಾಲ್ ಶಾಲಾ ಆವರಣದ 500 ಮೀಟರ್ ಒಳಗೆ ಈ ಎನರ್ಜಿ ಡ್ರಿಂಕ್ ಅಥವಾ ಯಾವುದೇ ಅಮಲು ಪದಾರ್ಥಗಳನ್ನು ಮಾರಾಟ ಮಾಡುವುದು ಕಂಡುಬಂದರೆ, ಸಂಬಂಧಪಟ್ಟವರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಆಹಾರ ಮತ್ತು ಔಷಧ ಆಡಳಿತ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ಎನರ್ಜಿ ಡ್ರಿಂಕ್ಸ್‌ ಸೇವನೆಯಿಂದ ಆರೋಗ್ಯಕ್ಕಾಗುವ ಅಪಾಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲು ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚಿಸಲಾಗಿದೆ.

ಇದನ್ನೂ ಓದಿ;

ತಜ್ಞರ ಕಳವಳ ಮತ್ತು ಶಾಸಕರ ಒತ್ತಾಯ

ಆರೋಗ್ಯ ತಜ್ಞರ ಪ್ರಕಾರ, ಇಂತಹ ಎನರ್ಜಿ ಡ್ರಿಂಕ್ಸ್‌ಗಳಲ್ಲಿ ಕೆಫೀನ್ ಮತ್ತು ಸಕ್ಕರೆಯ ಪ್ರಮಾಣ ಅತಿಯಾಗಿ ಇರುವುದರಿಂದ ಇದು ಶಾಲಾ ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ. ಈ ಎನರ್ಜಿ ಡ್ರಿಂಕ್ ಅನ್ನು 18 ವರ್ಷದೊಳಗಿನ ಮಕ್ಕಳಿಗೆ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸುವ ನಿಯಮ ತರುತ್ತೀರಾ ಎಂದು ಶಾಸಕ ಪಾಚ್ಪುತೆ ಸರ್ಕಾರವನ್ನು ಪ್ರಶ್ನಿಸಿದರು. ಚರ್ಚೆಯ ಸಂದರ್ಭದಲ್ಲಿ ಶಾಸಕರಾಹುಲ್ ಕುಲ್ ಮತ್ತು ವರುಣ್ ಸರ್ದೇಸಾಯಿ, ಮಕ್ಕಳಿಗೆ ಇಂತಹ ಪಾನೀಯಗಳು ಸುಲಭವಾಗಿ ಸಿಗದಂತೆ ತಡೆಯಲು ಸರ್ಕಾರ ಇನ್ನು ಹೆಚ್ಚಿನ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಸರ್ಕಾರವು ಈ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದರ ಜತೆಗೆ, ಶಾಲಾ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಸಚಿವ ಜಿರ್ವಾಲ್ ಭರವಸೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !