Wednesday, August 17, 2022

Latest Posts

ಹೊಟ್ಟೆ ನೋವು ತಾಳಲಾರದೆ ಮನನೊಂದು ಯುವತಿ ಆತ್ಮಹತ್ಯೆ..!

ಹೊಸ ದಿಗಂತ ವರದಿ, ಸುರಪುರ:

ಹೊಟ್ಟೆ ನೋವು ತಾಳಲಾರದೆ ಕ್ರಿಮಿನಾಶಕ ಸೇವಿಸಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಸಿದ್ದಾಪೂರ
ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸುಮಿತ್ರಾ ತಂದೆ ಸಣ್ಣೆಪ್ಪ (18) ಸುಮಾರು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಪೋಷಕರು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದರು ಸಹ ಯಾವುದೇ ಪ್ರಯೋಜನಯಾಗಿರಲಿಲ್ಲಿ. ಆದ್ದರಿಂದ ಮನನೊಂದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಕ್ರಿಮಿನಾಶಕ ಸೇವಿಸಿದ ಯುವತಿಯನ್ನು ಸುರಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.
ಸುರಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!