ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್‌ನಲ್ಲಿರುವ ನಟ ಅಲ್ಲು ಅರ್ಜುನ್ ಅವರ ಜುಬಿಲಿ ಹಿಲ್ಸ್ ನಿವಾಸದ ಮೇಲೆ ಕಲ್ಲುತೂರಾಟ ನಡೆಸಿ ಧ್ವಂಸಗೊಳಿಸಿದ ಆರೋಪ ಹೊತ್ತಿರುವ ಆರು ಆರೋಪಿಗಳಿಗೆ ಜಾಮೀನು ದೊರಕಿದೆ.
ಆರೋಪಿಗಳನ್ನು ಸೋಮವಾರ ಬೆಳಿಗ್ಗೆ ಹೈದರಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ. ಆರೋಪಿಗಳ ಪರ ವಾದ ಮಂಡಿಸಿದ ವಕೀಲ ರಾಮದಾಸ್, ಉಸ್ಮಾನಿಯಾ ವಿಶ್ವವಿದ್ಯಾಲಯದ ಈ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ವಿದ್ಯಾರ್ಥಿಗಳು ಮುಂದಾಗಿದ್ದಾರೆ ಎಂದಿದ್ದಾರೆ.
ಉಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸ್ ಪಡೆ ಅವರ ಮೇಲೆ ದಾಳಿ ನಡೆಸಿದಾಗ ಅವರು ತಮ್ಮ ಆತ್ಮರಕ್ಷಣೆಗಾಗಿ ಈ ರೀತಿ ವರ್ತಿಸಿದ್ದಾರೆ. ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇಂದು ಆರೋಪಿಗಳು ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಬಳಿಕ ಆರು ಜನರಿಗೆ ಯಾವುದೇ ಷರತ್ತುಗಳಿಲ್ಲದೆ ಮತ್ತು ದಂಡವಿಲ್ಲದೆ ಜಾಮೀನು ನೀಡಲಾಗಿದೆ ಎಂದು ರಾಮದಾಸ್ ಎಎನ್‌ಐಗೆ ತಿಳಿಸಿದ್ದಾರೆ.