ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ: ಅಲ್ಲು ಅರವಿಂದ್‌ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟ ಅಲ್ಲು ಅರ್ಜುನ್‌ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ ಎಂಟು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಅಲ್ಲು ಅರ್ಜುನ್‌ ತಂದೆ ಅಲ್ಲು ಅರವಿಂದ್‌ ಮಾತನಾಡಿದ್ದಾರೆ.

ನಮ್ಮ ಮನೆಯಲ್ಲಿ ನಡೆದ ಘಟನೆಯನ್ನು ಎಲ್ಲರೂ ನೋಡಿದ್ದಾರೆ. ಜುಬಿಲಿ ಹಿಲ್ಸ್ ಪೊಲೀಸರು ನಮ್ಮ ಮನೆಗೆ ಬಂದಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮ ಮನೆಯಲ್ಲಿ ಯಾರೇ ಜಗಳ ಮಾಡಿದರೂ ಅವರನ್ನು ಕರೆದುಕೊಂಡು ಹೋಗಲು ಪೊಲೀಸರು ಸಿದ್ಧರಿದ್ದಾರೆ. ಇಂತಹ ದುಷ್ಕೃತ್ಯಗಳಿಗೆ ಯಾರೂ ಪ್ರಚೋದನೆ ನೀಡಬಾರದು ಎಂದಿದ್ದಾರೆ.

ಒಯು ಜೆಎಸಿ ನಾಯಕರು ಅಲ್ಲು ಅರ್ಜುನ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಪ್ರತಿಭಟನಾಕಾರರನ್ನು ಮನೆಯ ಭದ್ರತಾ ಸಿಬ್ಬಂದಿ ತಡೆಯಲು ಪ್ರಯತ್ನಿಸಿದಾಗ ಕಲ್ಲು ತೂರಾಟ ಮಾಡಲಾಗಿದೆ ಎಂಬ ಮಾಹಿತಿ ಇದೆ. ಸದ್ಯ ಈ ವಿಚಾರದಲ್ಲಿ ಸಂಯಮ ಸಾಧಿಸುವ ಅಗತ್ಯವಿದೆ. ಅದಕ್ಕಾಗಿಯೇ ನಾವು ನಮ್ಮ ಸಮಯವನ್ನು ತೆಗೆದುಕೊಳ್ಳುತ್ತಿದ್ದೇವೆ. ದಯವಿಟ್ಟು ಎಲ್ಲರೂ ಅರ್ಥಮಾಡಿಕೊಳ್ಳಲು ನಾವು ವಿನಂತಿಸುತ್ತೇವೆ’ ಎಂದಿದ್ದಾರೆ ಅಲ್ಲು ಅರವಿಂದ್​.

ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರು ಇನ್ನೂ ಪ್ರತಿಕ್ರಿಯೆ ನೀಡುವುದು ಬಾಕಿ ಇದೆ. ‘ಪುಷ್ಪ 2’ ಸಿನಿಮಾ ಬಿಡುಗಡೆ ಆದಾಗ ಸಂಧ್ಯಾ ಚಿತ್ರಮಂದಿರಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದರು. ಆಗ ಉಂಟಾದ ಕಾಲ್ತುಳಿದಲ್ಲಿ ಮಹಿಳೆಯೊಬ್ಬರು ಮೃತರಾಗಿದ್ದರು. ಅವರ ಪುತ್ರ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಹಿಳೆಯ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!