ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ವಿರುದ್ಧ ಖಂಡನೆ ವ್ಯಕ್ತಪಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಂದು ಮಹಾನಗರ ಪಾಲಿಕೆ ಮುಂಭಾಗ ನಡೆದ ಪ್ರತಿಭಟನೆ ಹಿಂಸೆಯ ರೂಪ ಪಡೆಯಿತು.
ಪ್ರತಿಭಟನೆಯ ವೇಳೆ ಉದ್ರಿಕ್ತ ಕಾರ್ಯಕರ್ತರು ಖಾಸಗಿ ಬಸ್ಗೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಬಸ್ಸಿನ ಮುಂಭಾಗದ ಗಾಜಿಗೆ ಹಾನಿಯಾಗಿದೆ.
ಇದೇ ವೇಳೆ ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡರು. ತಕ್ಷಣ ಪೊಲೀಸರು ಟಯರ್ ಮೇಲೆ ನೀರು ಸಿಂಪಡಿಸಿ ಬೆಂಕಿಯನ್ನು ನಂದಿಸಿದರು.
ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಿದ್ದ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಮಂಗಳೂರಿನ ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.