ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದಯಗಿರಿ ಕಲ್ಲು ತೂರಾಟ ಪ್ರಕಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಠಾಣೆ ಸಬ್ ಇನ್ಸ್‌ಪೆಕ್ಟರ್ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತರ ಕಚೇರಿಯ ಆಟೋಮೇಷನ್ ಸೆಂಟರ್‌ಗೆ ವರ್ಗಾವಣೆ ಮಾಡಿ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಪ್ರಕಟಿಸಿದ್ದಾರೆ.
ಗಲಾಟೆ ತಡೆಯಲು ಅವಕಾಶ ಇದ್ದರೂ ಕೂಡ ನಿರ್ಲಕ್ಷ್ಯ ವಹಿಸಿದ್ದರಿಂದ ಗಲಭೆ ನಡೆದಿದೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.