April 9, 2026
Thursday, April 9, 2026
spot_img

ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳಿ ಎಂದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಈ ಘಟನೆಯನ್ನು ಖಂಡಿಸುತ್ತೇನೆ, ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ನಮ್ಮ ರಾಜ್ಯದ ಶಕ್ತಿ ಇರುವುದೇ ಏಕತೆ ಹಾಗೂ ಸಹೋದರತ್ವದಲ್ಲಿ. ಇದನ್ನು ನಾವು ಕಾಪಾಡಿಕೊಂಡು ಹೋಗಬೇಕು. ಎಲ್ಲರೂ ಶಾಂತ ರೀತಿಯಲ್ಲಿ ವರ್ತಿಸಿ. ಯಾವ ಪ್ರಚೋದನೆಗೂ ಕಿವಿ ಕೊಡಬೇಡಿ ಎಂದಿದ್ದಾರೆ.

ಘಟನೆ ಬೆನ್ನಲ್ಲೇ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದು, ಈಗಾಗಲೇ ಕೆಲವರನ್ನು ಬಂಧಿಸಿದ್ದಾರೆ. ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಉಳಿಸುವುದು ಎಲ್ಲರ ಹೊಣೆಗಾರಿಕೆ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !