ಕೇರಳದಲ್ಲಿ ಬಸ್​ಗಳ ಮೇಲೆ ಕಲ್ಲು ತೂರಾಟ: ರಕ್ಷಣೆಗಾಗಿ ಹೆಲ್ಮೆಟ್ ಧರಿಸಿದ ಚಾಲಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದಲ್ಲಿ ಇಂದು ಪಿಎಫ್ಐ ಕಚೇರಿಗಳ ಮೇಲೆಎನ್​ಐಎ ನಡೆಸಿರುವ ದಾಳಿಯನ್ನು ಖಂಡಿಸಿ ಕಾರ್ಯಕರ್ತರು ಹರತಾಳ (ಪ್ರತಿಭಟನೆ) ನಡೆಸಿದ್ದು, ಈ ವೇಳೆ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಈ ವೇಳೆ ಇದರಿಂದ ತಪ್ಪಿಸಿಕೊಳ್ಳಲು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನೊಬ್ಬ ಹೆಲ್ಮೆಟ್​ ಧರಿಸಿ ಬಸ್​ ಚಲಾಯಿಸುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್​ ಆಗುತ್ತಿದೆ.

ಪಿಎಫ್ಐ ಕಾರ್ಯಕರ್ತರು ಹರತಾಳ ಹೆಸರಿನಲ್ಲಿ ವ್ಯಾಪಕ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಅಲ್ಲದೇ ಕಲ್ಲು ತೂರಾಟದಲ್ಲಿ ಅನೇಕ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಹಾನಿಗೊಳಿಸಿದ್ದಾರೆ. ಈ ವೇಳೆಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಲು ಮುಂದಾದ ಚಾಲಕ ಹೆಲ್ಮೆಟ್​ ಧರಿಸಿ ಬಸ್​ ಚಲಾಯಿಸಿದ್ದು, ಹಲವರು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಎರ್ನಾಕುಲಂ ಜಿಲ್ಲೆಯ ಆಲುವಾ ಗ್ಯಾರೇಜ್, ಮರಂಪಲ್ಲಿ ಮತ್ತು ಪಕಲೋಮಟ್ಟಂನಲ್ಲಿ ವ್ಯಾಪಕ ಕಲ್ಲು ತೂರಾಟ ನಡೆದಿರುವ ಬಗ್ಗೆ ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!