ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಗುರುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ.
ಮುಜಾಫರ್‍ಪುರ-ಸಮಸ್ತಿಪುರ ಮಾರ್ಗದಲ್ಲಿ ಜೈನಗರದಿಂದ ದೆಹಲಿಗೆ ರೈಲು ಪ್ರಯಾಣಿಸುತ್ತಿದ್ದಾಗ ದಾಳಿ ನಡೆದಿದೆ. ಘಟನೆಯಲ್ಲಿ ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮಸ್ತಿಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿಡಿಗೇಡಿಗಳು ನಡೆಸಿದ ಕಲ್ಲು ತೂರಾಟದಿಂದ ರೈಲಿನ ಕೆಲವು ಕೋಚ್‍ಗಳ ಗಾಜುಗಳು ಪುಡಿಪುಡಿಯಾಗಿವೆ. ಕಲ್ಲು ಬೀಸಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.